ಮೇಷ ರಾಶಿಯವರ ಆಗಸ್ಟ್ 2024ರ ಭವಿಷ್ಯ: ಅನವಶ್ಯಕ ಖರ್ಚುಗಳನ್ನು ನಿಯಂತ್ರಣದಲ್ಲಿಡುವುದು ಉತ್ತಮ

ವೇದ ಜ್ಯೋತಿಷ್ಯದ ಆಧಾರದ ಮೇಲೆ ಮೇಷ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಮೊದಲನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 00-30 ಡಿಗ್ರಿಗಳನ್ನು ವ್ಯಾಪಿಸಿದೆ.

ಉದ್ಯೋಗದ ದೃಷ್ಟಿಯಿಂದ ಈ ತಿಂಗಳು ಮಿಶ್ರ ಫಲಿತಾಂಶಗಳನ್ನು ತರಬಹುದು. ಮೊದಲಾರ್ಧದಲ್ಲಿ ಕೆಲಸದ ಒತ್ತಡ ಹೆಚ್ಚು ಇರುತ್ತದೆ, ಎಷ್ಟು ಬದ್ರವಾಗಿಯೂ ಕೆಲಸ ಮಾಡಿದರೂ ಸೂಕ್ತ ಫಲಿತಾಂಶ ಅಥವಾ ಗುರುತಿನ ಕೊರತೆಯಿಂದ ನಿರಾಶೆಯಾಗಬಹುದು.

ಎರಡನೇ ಅರ್ಧದಲ್ಲಿ ಪರಿಸ್ಥಿತಿಗಳು ಬದಲಾಗಬಹುದು. ಸೂರ್ಯನು 5ನೇ ಮನೆಯಲ್ಲಿ ಇರುವುದರಿಂದ ಸೃಜನಾತ್ಮಕತೆ, ನಾಯಕತ್ವ ಮತ್ತು ಗುರುತಿನ ಅವಕಾಶಗಳಿಗೆ ದಾರಿ ತೋರಿಸುತ್ತದೆ. ಆದರೆ, ಅತಿವಿಶ್ವಾಸ ಮತ್ತು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳದೆ ಎಚ್ಚರಿಕೆಯಿಂದ ಇರುವುದು ಮುಖ್ಯ.

ಜೊತೆಗೆ ಎಲ್ಲವನ್ನೂ ನಾನು ಮಾತ್ರ ನೋಡಿಕೊಳ್ಳುತ್ತೇನೆ ಎನ್ನುವ ಅಹಂಕಾರವನ್ನು ಬಿಟ್ಟು, ಆತ್ಮೀಯರಿಗೆ ಹತ್ತಿರವಾಗುವುದಕ್ಕೆ ಪ್ರಯತ್ನಿಸಬೇಕು. ಕಾರ್ಯ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಸಮಸ್ಯೆಗಳ ಉಂಟಾಗುವ ಸಾಧ್ಯತೆ ಇದೆ. ನೀವು ಹೇಳಲು ಬಯಸಿದ ವಿಷಯಗಳಲ್ಲಿ, ನಿಮ್ಮ ಕಾರ್ಯದಲ್ಲಿ ಸ್ಪಷ್ಟತೆ ಇರಬೇಕು.

ನಿಮ್ಮ ಮಾತು ಅಥವಾ ಕೆಲಸದಲ್ಲಿ ಸ್ಪಷ್ಟತೆ ಇಲ್ಲದಿದ್ದರೆ ಇತರರು ನಿಮ್ಮನ್ನು ತಪ್ಪಾಗಿ ಅರ್ಥಮಾಡಿಕೊಳ್ಳುವ ಸಾಧ್ಯತೆ ಇದೆ. ಜೊತೆಗೆ ಪತ್ರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಬೇಕು. ತಪ್ಪು ಮಾಹಿತಿ ಕಾರಣದಿಂದ ಸಮಸ್ಯೆ ಉಂಟಾಗಬಹುದು. ಈ ತಿಂಗಳಲ್ಲಿ ನಿಮ್ಮ ಉತ್ಸಾಹ ಮತ್ತು ಕೋಪವನ್ನು ನಿಯಂತ್ರಣದಲ್ಲಿಡುವುದು ಉತ್ತಮ.

ಆರ್ಥಿಕವಾಗಿ ಈ ತಿಂಗಳು ಸಾಮಾನ್ಯ ವಾಗಿ ಇರುತ್ತದೆ. ಮೊದಲಾರ್ಧದಲ್ಲಿ ಮನೆಯನ್ನು ಅಥವಾ ವಾಹನದ ಮೆರೆಮ್ಮತ್ತುಗಳಿಗೆ ಖರ್ಚು ಹೆಚ್ಚು ಇರುತ್ತದೆ. ಜೊತೆಗೆ ಈ ತಿಂಗಳಲ್ಲಿ ಹೆಚ್ಚು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅನವಶ್ಯಕ ಖರ್ಚುಗಳನ್ನು ನಿಯಂತ್ರಣದಲ್ಲಿಡುವುದು ಉತ್ತಮ.

ನಿಮ್ಮ ರಾಶಿಯವರಿಗೆ ಕುಟುಂಬದ ಪ್ರಮುಖ ಗ್ರಹವಾದ ಶುಕ್ರನು ಅನಾನು ಕೂಲವಾದ ಸ್ಥಿತಿಯಲ್ಲಿರುವುದರಿಂದ ಈ ತಿಂಗಳಲ್ಲಿ ನಿಮ್ಮ ಕುಟುಂಬದಲ್ಲಿ, ವಿಶೇಷವಾಗಿ ಸ್ತ್ರೀಯರೊಂದಿಗೆ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಈ ಸಂಚಾರದ ಪರಿಣಾಮವಾಗಿ ಕುಟುಂಬ ಸದಸ್ಯರ ನಡುವೆ ಕೆಲವು ಗೊಂದಲಗಳು ಮತ್ತು ವ್ಯತ್ಯಾಸಗಳು ಉಂಟಾಗಬಹುದು. ನಿಮ್ಮ ಕೋಪ ಮತ್ತು ಉತ್ಸಾಹವನ್ನು ನಿಯಂತ್ರಣದಲ್ಲಿಡುವುದು ಮುಖ್ಯ.

ಮೊದಲಾರ್ಧದಲ್ಲಿ ಸೂರ್ಯನು ಅನಾನುಕೂಲವಾದ ಸ್ಥಿತಿಯಲ್ಲಿರುವು ದರಿಂದ ಜೀರ್ಣಕ್ರಿಯೆ ಸಮಸ್ಯೆ, ತಲೆ ನೋವುಗಳು ಮೊದಲಾದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆರೋಗ್ಯದ ಬಗ್ಗೆ ಗಮನಹರಿಸಿ ಸಮತೂಲ ಆಹಾರ ಸೇವಿಸುವುದು ಮುಖ್ಯ. ಜೊತೆಗೆ ಕುಜನು ಸಂಚಾರದ ಪರಿಣಾಮ ಅತಿಯಾದ ಉತ್ಸಾಹ ಮತ್ತು ದಣಿವು ಉಂಟಾಗಬಹುದು. ತಕ್ಕ ಪ್ರಮಾಣದಲ್ಲಿ ವಿಶ್ರಾಂತಿ ತೆಗೆದುಕೊಳ್ಳು ವುದು ಮತ್ತು ಒತ್ತಡವನ್ನು ಕಡಿಮೆ ಮಾಡುವುದು ಉತ್ತಮ.

ವ್ಯಾಪಾರಸ್ಥರಿಗೆ ಈ ತಿಂಗಳು ಸಾಮಾನ್ಯ ಸಮಯವಾಗಿದೆ. ಹೊಸ ಪಾಲುದಾರಿಕೆ ಒಪ್ಪಂದಗಳಿಗೆ ಇದು ಉತ್ತಮ ಸಮಯವಲ್ಲ. ಮುಖ್ಯ ಬಂಡವಾಳ ಯೋಜನೆಗಳನ್ನು ಮುಂದಿನ ತಿಂಗಳಿಗೆ ಮುಂದೂಡುವುದು ಉತ್ತಮ. ಪಾಲುದಾರರೊಂದಿಗೆ ಎಚ್ಚರಿಕೆಯಿಂದ ಇರುವುದು ಮುಖ್ಯ. ಒತ್ತಡದಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಅವುಗಳಿಂದ ಭವಿಷ್ಯದಲ್ಲಿ ತೊಂದರೆ ಉಂಟಾಗಬಹುದು.

ಬುಧನು ಸಂಚಾರದ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಕೆಲವು ಸವಾಲುಗಳು ಉಂಟಾಗಬಹುದು. ಏಕಾಗ್ರತೆ ಕೊರತೆಯು ಉಂಟಾಗಬಹುದು ಮತ್ತು ಅಧ್ಯಯನದ ಮೇಲಿನ ಆಸಕ್ತಿ ಕಡಿಮೆ ಆಗಬಹುದು. ಧೈರ್ಯದಿಂದ ಅಧ್ಯಯನ ಮಾಡುವುದು ಮತ್ತು ಅಗತ್ಯವಿದ್ದಲ್ಲಿ ಶಿಕ್ಷಕರ ಸಹಾಯ ಪಡೆಯುವುದು ಉತ್ತಮ. ಜೊತೆಗೆ ಅತಿವಿಶ್ವಾಸ ಮತ್ತು ಅಹಂಕಾರದಿಂದ ಎಚ್ಚರಿಕೆಯಿಂದ ಇರಬೇಕು. ಎರಡನೇ ಅರ್ಧದಲ್ಲಿ ಪರಿಸ್ಥಿತಿ ಸುಧಾರಿಸಬಹುದು.

ಮೇಷ ರಾಶಿ: ಅಶ್ವಿನಿ ನಕ್ಷತ್ರ (4 ಚರಣ), ಭರಣಿ ನಕ್ಷತ್ರ (4 ಚರಣ), ಕೃತ್ತಿಕಾ ನಕ್ಷತ್ರ (1ನೇ ಚರಣ) ದಲ್ಲಿ ಜನಿಸಿದವರು ಮೇಷ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಮಂಗಳ (ಮಂಗಳ/ ಕುಜ/ ಅಂಗಾರಕ).

ಮೇಷ ರಾಶಿಗೆ ಸೂಚಿಸಲಾದ ಅಕ್ಷರಗಳು: ಚು, ಚೆ, ಚೋ, ಲ, ಲಿ, ಲು, ಲೆ , ಲೊ, ಅ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!