ಮೈಸೂರು ಚಲೋಗಿಲ್ಲ ಬೆಂಬಲವೆಂದ ಕುಮಾರಸ್ವಾಮಿ; ಮನವೊಲಿಸಲು ದೌಡಾಯಿಸಿದ ಬಿಜೆಪಿ ಮುಖಂಡರು

ನವದೆಹಲಿ, (ಆಗಸ್ಟ್.01); ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಾದಯಾತ್ರೆ ನಿಲುವಿನ ಕುರಿತು ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇಂದು ಸಂಸತ್ ಭವನದ ಹೆಚ್.ಡಿ. ಕುಮಾರಸ್ವಾಮಿ ಅವರ ಕಚೇರಿಗೆ ದೌಡಾಯಿಸಿರುವ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ರಾಧಮೋಹನ್ ದಾಸ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾದಯಾತ್ರೆ ಬಗ್ಗೆ ಮಹತ್ವದ ಚರ್ಚೆ ನಡೆಸಿ, ಕುಮಾರಸ್ವಾಮಿ ಅವರ ಮನವೊಲಿಸಲು ಯತ್ನಿಸುತ್ತಿದ್ದಾರೆ.

ನಿನ್ನೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ? ಬಿಜೆಪಿಯವರು ನಡೆದುಕೊಂಡ ರೀತಿ ನನ್ನ ಮನಸ್ಸಿಗೆ ನೋವಾಗಿದೆ.

ಪಾದಯಾತ್ರೆ ಮುಖ್ಯಸ್ಥರನ್ನಾಗಿ ಯಾರನ್ನ ಮಾಡಿದ್ದಾರೆ? ಯಾರು ಈ ಪ್ರೀತಂಗೌಡ? ದೇವೇಗೌಡರ ಕುಟುಂಬವನ್ನ ಸರ್ವನಾಶ ಮಾಡಲು ಹೊರಟಿದ್ದವ. ಅವನನ್ನು ಸಭೆಗೆ ಕರಿತಾರೆ, ಅದಕ್ಕೆ ನನ್ನನ್ನೂ ಕರೀತಾರೆ, ನನಗೂ ಸಹಿಸೋಕೆ ಇತಿ ಮಿತಿ ಇದೆ ಎಂದು ಮಿತ್ರ ಪಕ್ಷ ಬಿಜೆಪಿಯ ಮುಖಂಡರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದರು.

ಪೆನ್‌ಡ್ರೈವ್‌ ಬೀದೀಲಿ ಹಂಚೋಕೆ ಯಾರು ಕಾರಣ ಎಂದು ಬಿಜೆಪಿಗರಿಗೆ ಪ್ರಶ್ನಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನನ್ನ ಕುಟುಂಬಕ್ಕೆ ವಿಷ ಹಾಕಿದವರನ್ನ ನನ್ನ ಜೊತೇಲಿ ಕೂರಿಸ್ತಾರೆ. ಈಗ ಪಾದಯಾತ್ರೆಗೆ ನಮ್ಮ ಬೆಂಬಲ ಕೇಳ್ತಾರಾ? ಎಂದು ಹರಿಹಾಯ್ದಿದ್ದರು.

ಯಾವುದೋ ಒಂದು ಪ್ರಕರಣ ಇಟ್ಕೊಂಡು ಪಾದಯಾತ್ರೆ ಮಾಡೋದು ಎಷ್ಚು ಸರಿ? ಜನರ ಭಾವನೆ, ನೋವಿಗೆ ಸ್ಪಂದಿಸಬೇಕಾಗಿದೆ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ ಎಂದು ಬಿಜೆಪಿ ಆಯೋಜಿಸಿರುವ ಪಾದಯಾತ್ರೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದ್ದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಹೆಚ್‌ಡಿಕೆ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ದೌಡಾಯಿಸಿ ಮಾತುಕತೆ ನಡೆಸುತ್ತಿದ್ದು, ಮುಖಂಡರಾದ ಬಂಡೆಪ್ಪ ಕಾಶೆಂಪೂರ್, ಸಂಸದ ಮಲ್ಲೇಶ್ ಬಾಬು ಇದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!