ಶ್ರೀರಂಗಪಟ್ಟಣ, (ಆಗಸ್ಟ್.01); ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತಿದೆ.

ಬುಧವಾರ ಸಂಜೆ 5 ಗಂಟೆಯಿಂದ ಕೆ.ಆರ್.ಎಸ್ ಜಲಾಶಯದಿಂದ 1,70,000 ಕ್ಯೂಸೆಕ್ ನೀರನ್ನು ಹೊರಕ್ಕೆ ಹರಿಸಲಾಗುತ್ತಿದೆ. ಇದರಿಂದಾಗಿ ಶ್ರೀರಂಗಪಟ್ಟಣ ಸಮೀಪದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಅಲ್ಲಿಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಯು ಅಪಾಯದ ಮಟ್ಟ ಮೀರಿ ಹರಿಯು ತಿದ್ದು, ನದಿಯಂಚಿನ ಹಲವು ಪ್ರದೇಶಗಳು ಭಾಗಶಃ ಜಲಾವೃತವಾಗಿದೆ.
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸುವುದು.
ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರು ಗಳನ್ನು ಬಿಡದಿರಲು ಸೂಚಿಸಲಾಗಿದೆ.
ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಪಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
