ಬೆಂಗಳೂರು, (ಆಗಸ್ಟ್.01); ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಂಬಂಧಿಸಿದಂತೆ ವಿವಿಧ ಯೋಜನೆಗಳಿಗೆ ಅನುದಾನ ಹಾಗೂ ಈಗಾಗಲೇ ಘೋಷಿಸಿರುವ ಅನುದಾನವನ್ನು ನೀಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಬುಧವಾರದಂದು ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವ ಡಿಕೆ ಶಿವಕುಮಾರ್, ಪೆರಿಫೆರಲ್ ರಿಂಗ್ ರಸ್ತೆ, ಸುರಂಗ ಮಾರ್ಗ ಯೋಜನೆ, ಬೆಂಗಳೂರಿನಲ್ಲಿ ನೀರಿನ ಮೂಲದ ಅಭಿವೃದ್ಧಿಗೆ ಅನುದಾನ. ರಕ್ಷಣಾ ಇಲಾಖೆ ವ್ಯಾಪ್ತಿಯಲ್ಲಿನ ಕೆಲ ಭೂಮಿಯನ್ನು ರಾಜ್ಯ ಸರಕಾರಕ್ಕೆ ಹಸ್ತಾಂತರಿಸುವ ವಿಷಯ ಸೇರಿದಂತೆ ಬೆಂಗಳೂರು ನಗರಾಭಿ ಏಕವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳಿಗೆ ಕೇಂದ್ರದ ನೆರವನ್ನು ಕೇಳಿದರು.

ಇನ್ನು ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಿರುವ ಡಿಕೆ ಶಿವಕುಮಾರ್ ಅವರು, ಮೇಕೆದಾಟು ತಥೆ ಯೋಜನೆಗೆ ಅನುಮೋದನೆ, ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ 5300 ಕೋಟಿ ರೂ. ಅನುದಾನ ಬಿಡುಗಡೆ, ಮಹದಾಯಿ ಯೋಜನೆ ಹಾಗೂ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ.
ಮೋದಿ ಭೇಟಿ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿ ಅವರು, ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣ ಬೆಂಗಳೂರಿಗೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್‌ನಲ್ಲಿ ಏನೂ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್‌ನರ್ಮ್ ಯೋಜನೆಯಲ್ಲಿ ಎಲೆಕ್ಟ್ರಾನಿಕ್ಸ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಲೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು.
ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿಸಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರಕಾರ ನೇರವಾಗಬೇಕು ಎಂದು ಕೇಳಲಾಗಿದೆ ಎಂದರು
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
