ಬೆಂ.ಗ್ರಾ.ಜಿಲ್ಲೆ, (ಆಗಸ್ಟ್.02): ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ-ಜೆಡಿಎಸ್ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವ ವಿಚಾರವಾಗಿ ಇಂದು ತುರ್ತು ಸಭೆ ಕರೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಮೈಸೂರು ಮೂಡಾ ಹಗರಣದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆ ವಿಚಾರವಾಗಿ ಇಂದು ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೂಚನೆಯ ಮೇರೆಗೆ ಬೆಂಗಳೂರಿನ ಜೆಪಿ ಭವನದ ಜೆಡಿಎಸ್ ಕೇಂದ್ರ ಕಚೇರಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಪ್ರಮುಖ ಚರ್ಚೆ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ತುರ್ತು ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಮಾಜಿ ಶಾಸಕರು ಕಡ್ಡಾಯವಾಗಿ ಭಾಗವಹಿಸಬೇಕೆಂದು ಬಿ.ಮುನೇಗೌಡ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

