ನೆಲಮಂಗಲ, (ಆಗಸ್ಟ್.02): ಇಲ್ಲಿನ ಶ್ರೀನಂದಿ ವೈಭವ್ ಹೋಟೆಲ್ ಮ್ಯಾನೇಜರ್ 24 ವರ್ಷದ ಸನ್ನಿಧಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಟೆಲ್ ಪಕ್ಕದ ಜಾಗದಲ್ಲಿ ಕಬ್ಬಿಣದ ಆ್ಯಂಗಲ್ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವ್ಯವಹಾರದಲ್ಲಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ.
ಈ ಕುರಿತು ಮೃತನ ಅಕ್ಕ ಶ್ರೀನಿಧಿಶೆಟ್ಟಿ ಎಂಬುವವರು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದು, ಆತ್ಮಹತ್ಯೆ ಬಗ್ಗೆ ಯಾವುದೇ ಅನುಮಾನ ಇಲ್ಲವೆಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
