ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು, (ಆಗಸ್ಟ್‌.3); ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್‌ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. 

ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕೆಂಗೇರಿಯಿಂದ ಆರಂಭವಾದ ಬಿಜೆಪಿ-ಜೆಡಿಎಸ್‌ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ. ಅವರ ಪಕ್ಷದವರೇ 3-4 ಸಾವಿರ ಕೋಟಿ ರೂ. ಲೂಟಿಯಾಗಿದೆ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದಲಿತರ ಜಮೀನಿನ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯಪಾಲರಿಗೆ ನೋಟಿಸ್‌ ಕೊಡಲು ಅಧಿಕಾರವಿದೆಯಾ ಎಂದು ಇವರು ಪ್ರಶ್ನೆ ಮಾಡುತ್ತಾರೆ. ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ದೂರು ಆಧರಿಸಿ ಯಡಿಯೂರಪ್ಪ ವಿರುದ್ಧ ಕ್ರಮ ವಹಿಸಿದ್ದರು. ಕಾಂಗ್ರೆಸ್‌ ನಾಯಕರು ಕೇವಲ ನೋಟಿಸ್‌ಗೆ ಗಢಗಢ ಎನ್ನುತ್ತಿದ್ದಾರೆ. ಕಾಂಗ್ರೆಸ್‌ ಈಗ ಒಡೆದ ಮನೆಯಾಗಿದೆ. ಇಂತಹ ಕಾಂಗ್ರೆಸ್‌ನ ಭ್ರಷ್ಟಾಚಾರದ ವಿರುದ್ಧ ನಾವೆಲ್ಲರೂ ಹೋರಾಟ ಮಾಡುತ್ತಿದ್ದೇವೆ. ಕೆಂಗೇರಿಯಲ್ಲಿ ಭೂ ಸ್ವಾಧೀನ ಮಾಡಿ ಪರಿಹಾರವಾಗಿ ಎಂ.ಜಿ.ರಸ್ತೆಯಲ್ಲಿ ನಿವೇಶನ ನೀಡಿದರೆ ಅದು ನ್ಯಾಯವೇ? ನೂರಾರು ಕಾನೂನು ಪ್ರಶ್ನೆಗಳು ನಮ್ಮ ಮುಂದಿದೆ ಎಂದರು. 

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಸದನದಲ್ಲಿ ಮಾತನಾಡಿದ್ದೇವೆ. ಆದರೆ ಮುಡಾ ಹಗರಣದ ಬಗ್ಗೆ ಮಾತನಾಡಲು ಅವಕಾಶ ನೀಡಿಲ್ಲ. ಅದಕ್ಕಾಗಿ ಬೀದಿಗಿಳಿದು ಹೋರಾಡುತ್ತಿದ್ದೇವೆ. ಕಾಂಗ್ರೆಸ್‌ ವಿರೋಧ ಪಕ್ಷವಾಗಿಯೇ ಪ್ರಶ್ನೆ ಕೇಳಬೇಕಿತ್ತು. ಈಗ ನಾವು ಹೋರಾಟ ಆರಂಭಿಸಿದ ಬಳಿಕ, ರೈಲು ಹೋದ ಬಳಿಕ ಟಿಕೆಟ್‌ ಪಡೆದಂತೆ ಹಿಂದಿನ ಸರ್ಕಾರದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಾರೆ. ಇದಕ್ಕೆ ಜನರು ಬೆಲೆ ಕೊಡುವುದಿಲ್ಲ. ಇವರ ಮೇಲೆ ಆರೋಪ ಬಂದಿದ್ದಕ್ಕೆ ಈಗ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಅಷ್ಟೆ ಎಂದರು. 

ಎರಡು ಹಗರಣಗಳ ಬಗ್ಗೆ ಮೊದಲು ಕಾಂಗ್ರೆಸ್‌ ಸರ್ಕಾರ ಜನರಿಗೆ ಉತ್ತರ ನೀಡಲಿ. ನಂತರ ನಮ್ಮ ಹಿಂದಿನ ಸರ್ಕಾರದ ವಿರುದ್ಧ ತನಿಖೆ ಮಾಡಿಕೊಳ್ಳಲಿ ಎಂದರು.  

ಪೊಲೀಸ್‌ ಮೃತ: ಯಾದಗಿರಿಯ ಪಿಎಸ್‌ಐ ಪರಶುರಾಮ್‌ ವರ್ಗಾವಣೆಗಾಗಿ ಲಂಚ ಕೊಡಲಾಗದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ಜನರನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಹೃದಯಾಘಾತವಾಗುವಂತೆ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದೆ ಎಂದರು.

187 ಕೋಟಿ ರೂ. ಹಣ ಉಳಿಸಲು ಹೋಗಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಈಗ ಪಿಎಸ್‌ಐ ಸತ್ತಿದ್ದಾರೆ. ಈ ಸರ್ಕಾರ ಯಾವುದೇ ಅಧಿಕಾರಿಗಳನ್ನು ಬಿಡುವುದಿಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲು ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗುವುದು ಸೂಕ್ತ. ಕಾಂಗ್ರೆಸ್‌ನ ಲಂಚಾವತಾರದ ವಿರುದ್ಧ ನಿಲ್ಲುವವರಿಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ. ಅಂತಹವರ ಪರವಾಗಿ ನಾನು ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!