ದೊಡ್ಡಬಳ್ಳಾಪುರ, (ಆಗಸ್ಟ್.03): ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಮುಖ್ಯರಸ್ತೆಯಲ್ಲಿನ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಇಂದು (ಆಗಸ್ಟ್.03) ರಂದು ಬೆಳಿಗ್ಗೆ 10 ಗಂಟೆಯಿಂದ ಆ.4ರ ಬೆಳಿಗ್ಗೆ 5 ಗಂಟೆವರೆಗೆ ಬಂದ್ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ಬ್ಯಾನರ್ ಲಗತ್ತಿಸಿದೆ

ಈ ರೈಲ್ವೆ ಗೇಟ್ ಮೂಲಕ ಘಾಟಿ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರಕ್ಕೆ ಪ್ರತಿದಿನ ನೂರಾರು ವಾಹನಗಳು ಹೋಗುತ್ತವೆ. ಗೇಟ್ ಬಳಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಸುಮಾರು 20 ಗಂಟೆಗಳ ಕಾಲ ನಿರಂತರವಾಗಿ ಕೆಲಸ ನಡೆಯುತ್ತಿದೆ.

ಈ ರಸ್ತೆಗೆ ಬದಲಿಯಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಹಾಗೂ ಈ ಭಾಗದ ಗ್ರಾಮಗಳಿಗೆ ವಾಹನಗಳು ಹೋಗಲು ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿನ ಗೊಲ್ಲಹಳ್ಳಿ ಬಳಿ ಬಲಕ್ಕೆ ತಿರುಗಿ ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ ರಸ್ತೆ ಮೂಲಕ ಘಾಟಿ ಕ್ಷೇತ್ರ ಸೇರಿದಂತೆ ಈ ಭಾಗದ ಗ್ರಾಮಗಳಿಗೆ ಹೋಗಬಹುದಾಗಿದೆ.
ಇದಲ್ಲದೆ ಬೆಂಗಳೂರು ಸೇರಿಂದಂತೆ ವಿವಿಧ ಕಡೆಗಳಿಂದ ಬರುವವರು ಗೌರಿಬಿದನೂರು ರಾಜ್ಯ ಹೆದ್ದಾರಿಯ ಮಾಕಳಿ ರೈಲ್ವೆ ನಿಲ್ದಾಣದ ರಸ್ತೆ ಮೂಲಕವು ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಲು ಉತ್ತಮ ರಸ್ತೆ ಸೌಲಭ್ಯ ಇದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
