Landslide; ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್.03); ಇಲ್ಲಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಭೂಕುಸಿತಗಳಲ್ಲಿ ಮೃತಪಟ್ಟವರ ಸಂಖ್ಯೆ 344ರ ಗಡಿ ದಾಟಿದೆ. 

ಘಟನೆಯಲ್ಲಿ 300 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವುದರಿಂದ ಸಾವು-ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಿರಂತರ ಮಳೆಯಿಂದಾಗಿ ಗುರುವಾರ ಸಂಜೆ 4 ಗಂಟೆಯವರೆಗೆ ಮುಂದುವರೆಯಬೇಕಿದ್ದ ರಕ್ಷಣಾ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗಿತ್ತು. ಈಗ ಮತ್ತೆ ಆರಂಭಿಸಿದ್ದು, ಪರಿಹಾರ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯನ್ನು ಮತ್ತಷ್ಟು ದಿನಕ್ಕೆ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬದುಕುಳಿದವರನ್ನು ಹುಡುಕಲು ಡ್ರೋನ್; ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಬದುಕುಳಿದವರನ್ನು ಹುಡುಕಲು ನಿರಂತರ ಪ್ರಯತ್ನ ಮುಂದುವರಿದಿದ್ದು, ಡ್ರೋನ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

ಚಾಲಿಯಾರ್ ನದಿಯ ಸುತ್ತಮುತ್ತಲಿನ ಎಂಟು ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಮತ್ತು ಈಜು ಪರಿಣಿತ ಸ್ಥಳೀಯರು ಕೂಡ ಶೋಧ ಕಾರ್ಯ ನಡೆಸುತ್ತಿದ್ದು, ಹೆಲಿಕಾಪ್ಟರ್ ಬಳಸಿ ಶೋಧ ನಡೆಸಲಾಗುತ್ತಿದೆ. 

ಈ ಭೂಕುಸಿತವು ಮನುಷ್ಯರಷ್ಟೇ ಅಲ್ಲ, ಮೆಪ್ಪಾಡಿಯಲ್ಲಿ ಬದುಕುಳಿದಿರುವ ಸಾಕುಪ್ರಾಣಿಗಳನ್ನು ಕೂಡ ಸಂಕಷ್ಟಕ್ಕೆ ದೂಡಿದೆ. ಅವುಗಳಿಗೆ ಆಹಾರ ಒದಗಿಸುವುದು ಸಮಸ್ಯೆಯಾಗಿದೆ. ನಿನ್ನೆ ಚೂರಲ್‌ಮಲಾದಲ್ಲಿರುವ ವನರಾಣಿ ಎಸ್ಟೇಟ್‌ನಲ್ಲಿ ಪಶುಸಂಗೋಪನಾ ಇಲಾಖೆಯು ಜಾನುವಾರುಗಳಿಗೆ ಆಹಾರ ನೀಡಿದೆ.

ಕರ್ನಾಟಕದಿಂದ ನೂರು ಮನೆ ನಿರ್ಮಾಣ; ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.

ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು.

ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!