ಬೆಂಗಳೂರು, (ಆಗಸ್ಟ್.04); ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಬಳಿ ಶನಿವಾರ ಸಾಯಂಕಾಲ 5:47ರ ಹೊತ್ತಿಗೆ ಘಟನೆ ನಡೆದಿದೆ. 35 ವರ್ಷ ಮೇಲ್ಪಟ್ಟ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪದೇ ಪದೇ ಮೆಟ್ರೋ ಹಳಿಗಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯ ವಿಚಾರವಾಗಿ ನಮ್ಮ ಮೆಟ್ರೋ ವಿರುದ್ಧ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮೆಟ್ರೋ ಟ್ರ್ಯಾಕ್ಗೆ 4 ವರ್ಷದ ಮಗು ಇಳಿದಿತ್ತು. ಇದು ಮಾಸುವ ಮುನ್ನವೇ ಇದೀಗ 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡ ಕಲ್ಲಸಂದ್ರ ಮೆಟ್ರೋ ನಿಲ್ದಾಣ ಬಳಿ ಹಳಿ ಮೇಲೆ ಜಂಪ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಳಿಗೆ ಜಂಪ್ ಮಾಡಿದಾಗ ವ್ಯಕ್ತಿಯ ಸ್ಥಿತಿ ಗಂಭೀರವಾಗಿತ್ತು.
ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಹೀಗಾಗಿಯೇ ತೀವ್ರ ರಕ್ತಸ್ರಾವ ವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ದೊಡ್ಡಕಲ್ಲಸಂದ್ರ ಮಾರ್ಗ ದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು.
ಪ್ರಯಾಣಿಕರ ಪರದಾಟ: ವ್ಯಕ್ತಿ ಆತ್ಮಹತ್ಯೆಯಿಂದ ಹಸಿರು ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಏಕಾಏಕಿ ಸ್ಥಗಿತ ಆಗಿದ್ದರಿಂದ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.
ಯಲಚೇನಹಳ್ಳಿಯಿಂದ ಸಿಲ್ಕ್ ಇನ್ಸಿಟ್ಯೂಟ್ ನಡುವೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಘಟನಾ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….