ಕಮಲ-ದಳ ದೋಸ್ತಿಗಳಿಗೆ ನಿರಾಸೆ; ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲವೆಂದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು, (ಆಗಸ್ಟ್‌.4); ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ  ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸ್ಪಷ್ಟ ಪಡಿಸಿದರು.

ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ  ಎಂದು ಟೀಕಿಸಿದರು. 

ಪ್ರಜ್ವಲ್‌ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್‌ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು. 

ಸಿದ್ದರಾಮಯ್ಯ ಅವರು ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ: ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ.

ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರ: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್‌ ನವರಿಗೆ ಇದು ರಾಜಕೀಯವಾಗಿ ನಷ್ಟ ಉಂಟು ಮಾಡುವುದು ಹಾಗೂ ವಿವಿಧ ಪ್ರಕರಣಗಳ ತನಿಖೆಯಿಂದ ವೈಯಕ್ತಿಕವಾಗಿಯೂ ಅವರಿಗೆ ತೊಂದರೆಯಾಗಲಿದೆ ಎಂಬುದು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.

ರಾಜ್ಯಪಾಲರ ಬಳಕೆ ದುರದೃಷ್ಟಕರ: ದುರದೃಷ್ಟವಶಾತ್‌ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಕಾರಣ ಕೇಳಿ ನೋಟೀಸ್‌ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್‌ ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು.

ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್‌ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು. 

ಭ್ರಷ್ಟಾಚಾರ ಕುರಿತು ಬಿಜೆಪಿ ಮಾತಾಡುವುದು ಹಾಸ್ಯಾಸ್ಪದ: ಬಿಜೆಪಿ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ವಿಜಯೇಂದ್ರ ಅವರ ಮೇಲೆ ಎಷ್ಟು ಆರೋಪಗಳಿವೆ?, ಪ್ರಜ್ವಲ್‌ ರೇವಣ್ಣ ವಿರುದ್ಧ ಎಷ್ಟು ಆರೋಪಗಳಿವೆ? ಅಂತವರು ತಾವೇ ಅತ್ಯಂತ ಸಭ್ಯರೆಂಬ ಸೋಗಿನಲ್ಲಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರ ಕಾಳಜಿ ಹೊಂದಿದ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಬಡ ಜನರ ಜೊತೆ ನಿಂತ ಮುಖ್ಯಮಂತ್ರಿಯವರನ್ನು ಮುಗಿಸಲು ಮುಂದಾಗಿದ್ದಾರೆ ಎಂದರು. 

ಸಮಸ್ಯೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಿ: ಆರೋಪಗಳ ಕುರಿತು ಕಾನೂನು ತನ್ನದೇ ಕ್ರಮ ವಹಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ. ನಿಜವಾಗಿಯೂ ಸಮಸ್ಯೆ ಇದ್ದರೆ ಕಾನೂನಿನ ಮೊರೆ ಹೋಗಲಿ. ಅದರ ಬದಲಾಗಿ ಪ್ರತಿದಿನ ಸಿದ್ದರಾಮಯ್ಯ ಅವರ ವಿರುದ್ಧ ಪದೇ ಪದೇ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಅವರು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. 

ಕಾಂಗ್ರೆಸ್‌ ಬಡವರ ಪರವಾಗಿದೆ ಎಂದು ಅವರಿಗೂ ಗೊತ್ತಿದೆ. ಹಿಂದಿನ ಚುನಾವಣೆ ಕರ್ನಾಟಕದಲ್ಲಿ ಬಡವರು-ಶ್ರೀಮಂತರ ನಡುವೆ ಇತ್ತು. ಆದ್ದರಿಂದಲೇ  135 ಸೀಟುಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದೇವೆ. 

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ತಾರತಮ್ಯ ಕುರಿತು ಯಾರೂ ಮಾತನಾಡುತ್ತಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಇಲ್ಲಿಂದಲೇ ಆಯ್ಕೆಯಾಗಿದ್ದರೂ ಯಾವುದೇ ನೆರವು ಒದಗಿಸಿಲ್ಲ.ಸೀಮಿತ ಸಂಪನ್ಮೂಲದೊಂದಿಗೆ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರ ಬೆಂಬಲ ನೀಡುವ ಬದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ.  ನಾವು ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]