ನವದೆಹಲಿ, (ಆಗಸ್ಟ್.06); ನೆರೆಯ ಬಾಂಗ್ಲಾದೇಶದಲ್ಲಿ ವ್ಯಾಪಕ ಪ್ರತಿಭಟನೆ, ಹಿಂಸಾಚಾರದ ಬೆನ್ನಲ್ಲೇ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನ ಮಾಡಿದ ಒಂದು ದಿನದ ಬಳಿಕ ರಾಷ್ಟ್ರಪತಿ ಮೊಹಮ್ಮದ್ ಶಹಾಬುದ್ದೀನ್ ಸಂಸತ್ತನ್ನು ವಿಸರ್ಜಿಸಿದ್ದಾರೆ.
ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಮುಖಂಡರೊಂದಿಗೆ ಚರ್ಚೆ ನಡೆಸಿದ ಬಳಿಕ ಸಂಸತ್ತನ್ನು ವಿಸರ್ಜಿಸುವ ನಿರ್ಧಾರವನ್ನು ರಾಷ್ಟ್ರಪತಿ ತೆಗೆದುಕೊಂಡಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಪ್ರಕಟಣೆ ತಿಳಿಸಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.
ಈ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದು, ಬಾಂಗ್ಲಾದೇಶದ ಕುರಿತು ಕನಿಷ್ಠ ಪ್ರತಿಕ್ರಿಯೆ ನೀಡುವಂತೆ ಆಗ್ರಹಿಸಿದ್ದಾರೆ.
ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.
ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡೀವ್ಸ್ ಮುಸ್ಲಿಂ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಬಾಯೇ ಬಿಡಲಿಲ್ಲ.
ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ಮೋದಿ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ. ಮೋದಿಯವರಿಗೆ ರಾಜೀನಾಮೆ ಕೊಡಿ ಎಂದು ಕೇಳಿ ಎಂದಿದ್ದಾರೆ.
ಬಾಂಗ್ಲಾದೇಶದ ಘರ್ಷಣೆ ಬಗ್ಗೆ ಮೋದಿ ಯಾಕೆ ಮೌನವಹಿಸಿದ್ದಾರೆ? ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೂಡ ವಾಸ್ತವದ ಬಗ್ಗೆ ಏನನ್ನೂ ಹೇಳಿಲ್ಲ.
ಚೀನಾ, ಪಾಕಿಸ್ತಾನ ಮತ್ತು ಪರೋಕ್ಷವಾಗಿ ಅಮೆರಿಕವು ಬಾಂಗ್ಲಾದಲ್ಲಿ ಹೊಸ ಸರ್ಕಾರ ರಚನೆಗೆ ಬೆಂಬಲ ನೀಡಿದೆ. ಆದರೆ ಭಾರತವು ಒಳ್ಳೆಯದು ಅಥವಾ ಕೆಟ್ಟದು ಎಂದು ಹೇಳುತ್ತಿಲ್ಲ. ಯಾರೂ ಬಂದಿಲ್ಲ ಎನ್ನುವ ರೀತಿಯ ವರ್ತನೆ ಮಾಡುತ್ತಿದೆ? ಹಸೀನಾರನ್ನು ಕೈಬಿಡುವ ಯೋಜನೆ ಮೋದಿ ಮಾಡಬಹುದು ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….