ಮಂಡ್ಯ, (ಆಗಸ್ಟ್.06); ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ.
ಕೇಂದ್ರ ಎನ್‌ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಎಸುಗುತ್ತಿರುವ ಅನ್ಯಾಯದ ವಿರುದ್ಧ ಹಾಗೂ ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತ್ರತ್ವದಲ್ಲಿ ಮಂಡ್ಯದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇವತ್ತಿನಿಂದ ಗೃಹಲಕ್ಷ್ಮೀ ಹಣ ನಿಮ್ಮ ನಿಮ್ಮ ಖಾತೆಗೆ ಜಮೆ ಆಗುತ್ತದೆ. ಕೆಲವು ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ನಿಮ್ಮ ನಿಮ್ಮ ಖಾತೆಗೆ ಜಮೆ ಆಗಲಿದೆ ಎಂದು ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ-ಜೆಡಿಎಸ್ ಮಾಡುತ್ತಿರುವ ಅಪಪ್ರಚಾರವನ್ನು ಖಂಡಿಸಿದರು.
ಈ ವೇಳೆ ಸಚಿವರಾದ ಕೆ.ಎಚ್.ಮುನಿಯಪ್ಪ, ಬೋಸರಾಜು, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಿ.ಸುಧಾಕರ್, ಸಂತೋಷ್ ಲಾಡ್, ಶರಣಪ್ರಕಾಶ್ ಪಾಟೀಲ, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪ ಅಮರ್ ನಾಥ್.
ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಶಾಸಕರಾದ ರವಿಕುಮಾರ್ ಗಣಿಗ, ಎಚ್.ಸಿ. ಬಾಲಕೃಷ್ಣ, ಟಿ.ರಘುಮೂರ್ತಿ, ಗೋವಿಂದಪ್ಪ, ರಮೇಶ್ ಬಾಬು ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಐವಾನ್ ಡಿಸೋಜ, ಮಧು ಮಾದೇಗೌಡ, ಮುಖ್ಯಮಂತ್ರಿಗಳ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….