ಬಾಂಗ್ಲಾದೇಶ ಅರಾಜಕತೆ: ಮೋದಿಗೆ ಧೈರ್ಯ ಇಲ್ಲ ರಾಜೀನಾಮೆ ಕೇಳಿ – ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ನವದೆಹಲಿ, (ಆಗಸ್ಟ್.06); ನೆರೆಯ ಬಾಂಗ್ಲಾದೇಶದಲ್ಲಿ ವ್ಯಾಪಕ ಪ್ರತಿಭಟನೆ, ಹಿಂಸಾಚಾರದ ಬೆನ್ನಲ್ಲೇ ಶೇಖ್‌ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನ ಮಾಡಿದ ಒಂದು ದಿನದ ಬಳಿಕ ರಾಷ್ಟ್ರಪತಿ ಮೊಹಮ್ಮದ್‌ ಶಹಾಬುದ್ದೀನ್‌ ಸಂಸತ್ತನ್ನು ವಿಸರ್ಜಿಸಿದ್ದಾರೆ.

ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಮುಖಂಡರೊಂದಿಗೆ ಚರ್ಚೆ ನಡೆಸಿದ ಬಳಿಕ ಸಂಸತ್ತನ್ನು ವಿಸರ್ಜಿಸುವ ನಿರ್ಧಾರವನ್ನು ರಾಷ್ಟ್ರಪತಿ ತೆಗೆದುಕೊಂಡಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಪ್ರಕಟಣೆ ತಿಳಿಸಿದೆ ಎಂದು ಡೈಲಿ ಸ್ಟಾರ್‌ ಪತ್ರಿಕೆ ವರದಿ ಮಾಡಿದೆ.

ಈ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದು, ಬಾಂಗ್ಲಾದೇಶದ ಕುರಿತು ಕನಿಷ್ಠ ಪ್ರತಿಕ್ರಿಯೆ ನೀಡುವಂತೆ ಆಗ್ರಹಿಸಿದ್ದಾರೆ‌.

ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.

ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡೀವ್ಸ್ ಮುಸ್ಲಿಂ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಬಾಯೇ ಬಿಡಲಿಲ್ಲ.

ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ಮೋದಿ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ. ಮೋದಿಯವರಿಗೆ ರಾಜೀನಾಮೆ ಕೊಡಿ ಎಂದು ಕೇಳಿ ಎಂದಿದ್ದಾರೆ.

ಬಾಂಗ್ಲಾದೇಶದ ಘರ್ಷಣೆ ಬಗ್ಗೆ ಮೋದಿ ಯಾಕೆ ಮೌನವಹಿಸಿದ್ದಾರೆ? ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೂಡ ವಾಸ್ತವದ ಬಗ್ಗೆ ಏನನ್ನೂ ಹೇಳಿಲ್ಲ.

ಚೀನಾ, ಪಾಕಿಸ್ತಾನ ಮತ್ತು ಪರೋಕ್ಷವಾಗಿ ಅಮೆರಿಕವು ಬಾಂಗ್ಲಾದಲ್ಲಿ ಹೊಸ ಸರ್ಕಾರ ರಚನೆಗೆ ಬೆಂಬಲ ನೀಡಿದೆ. ಆದರೆ ಭಾರತವು ಒಳ್ಳೆಯದು ಅಥವಾ ಕೆಟ್ಟದು ಎಂದು ಹೇಳುತ್ತಿಲ್ಲ. ಯಾರೂ ಬಂದಿಲ್ಲ ಎನ್ನುವ ರೀತಿಯ ವರ್ತನೆ ಮಾಡುತ್ತಿದೆ? ಹಸೀನಾರನ್ನು ಕೈಬಿಡುವ ಯೋಜನೆ ಮೋದಿ ಮಾಡಬಹುದು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!