Doddaballapura: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಯಾಗಿ ದೊಡ್ಡಬಳ್ಳಾಪುರದ ಜೈ ಕುಮಾರ್ ಆಯ್ಕೆ

ದೊಡ್ಡಬಳ್ಳಾಪುರ, (ಆಗಸ್ಟ್.06); ವೃಂದ ಹಾಗೂ ನೇಮಕಾತಿ ನಿಯಮಗಳ  ತಿದ್ದುಪಡಿಗಾಗಿ ರಾಜ್ಯ ಸಂಘ ಸರ್ಕಾರದ ವಿರುದ್ಧ ತೀವ್ರವಾದ ಹೋರಾಟ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ನಾಗೇಶ್ ಹೇಳಿದರು.

ಅವರು ಇಂದು ಡಿಪಿವಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಈ ತಿಂಗಳ 12ರಂದು ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದಲ್ಲಿ ಎಲ್ಲ ಶಿಕ್ಷಕರು ಭಾಗವಹಿಸಿ ಮುಷ್ಕರವನ್ನ ಯಶಸ್ವಿಗೊಳಿಸಬೇಕೆಂದು ಹೇಳಿ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ವಿವರವಾಗಿ ತಿಳಿಸಿದರು ಇದರ ವಿರುದ್ಧ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಈಗಾಗಲೇ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ವೃಂದ ಹಾಗೂ ನೇಮಕಾತಿಯ ನಿಯಮಗಳ  ಬಗ್ಗೆ ಹಾಗೂ ಇದರಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸವಿಸ್ತಾರವಾಗಿ ಮನವರಿಕೆ ಮಾಡಿಕೊಟ್ಟಿದ್ದು, ಆದಷ್ಟು ಬೇಗ ತಿದ್ದುಪಡಿ ಮಾಡುತ್ತಾರೆಂಬ ಭರವಸೆ ಇದೆ ಎಂದರು.

ರಾಜ್ಯ ಉಪಾಧ್ಯಕ್ಷ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷ ಗಿರೀಶ್ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತುಂಬಾ ಬಲಿಷ್ಠ ವಾಗಿದ್ದು ಯಾವುದೇ ಕಾರಣಕ್ಕೂ ಶಿಕ್ಷಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ನಮಗೆ ನ್ಯಾಯ ಸಿಗಲು ಎಲ್ಲ ಶಿಕ್ಷಕರ ಸಹಕಾರ ಅಗತ್ಯವಾಗಿದ್ದು ಎಲ್ಲರೂ ಸಹ ಮುಷ್ಕರದಲ್ಲಿ ಭಾಗವಹಿಸಬೇಕೆಂದು ಕೇಳಿಕೊಂಡರು, 

ಇದೇ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಹೊಸಕೋಟೆಯ ಶ್ರೀನಿವಾಸ್ ಹಾಗೂ ಕಾರ್ಯದರ್ಶಿ ಗಿರೀಶ್ ರವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಹಿಂದೆ ಮಾಡಿ ಕೊಂಡಿದ್ದ ಒಪ್ಪಂದದಂತೆ, ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ನೆಲಮಂಗಲದ  ಟಿ.ವಾಸುದೇವಮೂರ್ತಿಯನ್ನು ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ದೊಡ್ಡಬಳ್ಳಾಪುರದ ಜೈ ಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಘೋಷಿಸಿದರು.

ಇದಕ್ಕೆ ಸಭೆಯಲ್ಲಿದ್ದ ಎಲ್ಲಾ ಸದಸ್ಯರು ಸಮ್ಮತಿ ಸೂಚಿಸಿದರು.

ಅಧ್ಯಕ್ಷ ಹುದ್ದೆಯನ್ನು ಸ್ವೀಕರಿಸಿ ಮಾತನಾಡಿದ ಟಿ.ವಾಸುದೇವಮೂರ್ತಿ, ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಕರ ಒಡನಾಡಿಯಾಗು ಸದಾ ಸ್ಪಂದಿಸುತ್ತ ಶಿಕ್ಷಕರ ಒಡನಾಡಿಯಾಗಿ ಅವರ ಕೆಲಸಗಳನ್ನು ಮಾಡುತ್ತೇನೆಂದು ಹೇಳಿದರು,

ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಎಂ.ವಿ.ಚಂದ್ರಪ್ಪ, ನಾಲ್ಕು ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!