ಪ್ಯಾರಿಸ್, (ಆಗಸ್ಟ್.06); ಟೋಕಿಯೊ ಒಲಿಂಪಿಕ್ ಅರ್ಹತಾ ಹಂತದಲ್ಲಿ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ಚೋಪ್ರಾ ತನ್ನ ಮೊದಲ ಪ್ರಯತ್ನದಲ್ಲಿ 89.34 ಮೀ ಎಸೆಯುವ ಮೂಲಕ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದರು. ಭಾರತದ ಗೋಲ್ಡನ್ ಬಾಯ್ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
ಆಗಸ್ಟ್ 8 ರಂದು ಜಾವೆಲಿನ್ ಎಸೆತದ ಫೈನಲ್ ಪಂದ್ಯ ನಡೆಯಲಿದೆ.
ಟೋಕಿಯೊ ಒಲಿಂಪಿಕ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಮೇಲೆ ಭಾರತೀಯರೆಲ್ಲರೂ ಪದಕ ಗೆಲ್ಲುವ ಆಸೆ ಕಂಗಳಿಂದ ಎದುರು ನೋಡುತ್ತಿದ್ದಾರೆ. ಇನ್ನೊಂದೆಡೆ ಪ್ಯಾರಿಸ್ ಒಲಿಂಪಿಕ್ ನಲ್ಲಿ ತನ್ನ ಭುಜದ ಮೇಲೆ ರಾಷ್ಟ್ರದ ಭಾರವನ್ನು ಹೊತ್ತುಕೊಂಡು ಪುರುಷರ ಜಾವೆಲಿನ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಭರ್ಜರಿಯಾಗಿ ಜಾವೆಲಿನ್ ಥೋ ಆರಂಭಿಸುವ ಮೂಲಕ ಚಿನ್ನದ ಪದಕದ ಮೇಲೆ ಗುರಿ ಇರಿಸಿದ್ದಾರೆ.
ಈ ಪಂದ್ಯದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ, ಒಲಿಂಪಿಕ್ಸ್ ಇತಿಹಾಸದಲ್ಲಿ ಪ್ರಶಸ್ತಿ ಉಳಿಸಿಕೊಂಡ ಐದನೇ ಜಾವೆಲಿನ್ ಎಸೆತಗಾರ ಎನಿಸಿಕೊಳ್ಳಲಿದ್ದಾರೆ. ಜೊತೆಗೆ ಒಲಿಂಪಿಕ್ಸ್ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಎರಡು ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
ಇನ್ನೊಂದೆಡೆ ನೀರಜ್ ಚೋಪ್ರಾ ನಂತರ, ಅವರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಅರ್ಷದ್ ನದೀಮ್ ಕೂಡ ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಜಾವೆಲಿನ್ ಥೋ ಫೈನಲ್ಗೆ ಪ್ರವೇಶಿಸಿದ್ದಾರೆ
ನೀರಜ್ ಅವರಂತೆಯೇ, ಪಾಕಿಸ್ತಾನದ ತಾರೆ ಕೂಡ ತಮ್ಮ ಮೊದಲ ಪ್ರಯತ್ನದಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ್ದು 86.59 ಮೀ ದೂರವನ್ನು ದಾಖಲಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….