ಮೈಸೂರು ಚಲೋ DAY-04: ನೈತಿಕತೆ ಇದ್ರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ – ನಿಖಿಲ್ ಕುಮಾರಸ್ವಾಮಿ ಆಗ್ರಹ

ಮಂಡ್ಯ, (ಆಗಸ್ಟ್.06): ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮದ್ದೂರು ತಾಲೂಕಿನ ಸೋಮನಹಳ್ಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

ಮುಡಾ, ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ.ಮೂಡಾಗೆ ಸಂಬಂಧಿಸಿದ ಸುಳ್ಳುದಾಖಲೆ ಸೃಷ್ಟಿ ಮಾಡಿ 14 ಸೈಟ್ ಗಳನ್ನ ಪಡೆದುಕೊಂಡಿದ್ದಾರೆ. ಈ ವಿಷಯಕ್ಕೆ  ಸಂಬಂಧಿಸಿದಂತೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರು ರೈತ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಿನ್ನೆ ಕೆಂಗಲ್ ನಿಂದ ನಿಡಘಟ್ಟಕ್ಕೆ ಪಾದಯಾತ್ರೆ ಬಂದಿದ್ದೇವೆ.

ನಿನ್ನೆ ಪಕ್ಷದ ಕಾರ್ಯಕರ್ತೆ ಗೌರಮ್ಮ  ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿರೋದು ಮನಸ್ಸಿಗೆ ನೋವಾಗಿದೆ. ಪಾದಯಾತ್ರೆಗೆ ಎರಡು ಪಕ್ಷದ ಕಾರ್ಯಕರ್ತರು ಪ್ರತಿದಿನ ನಮ್ಮ ಜೊತೆ  ಹೆಗಲಿಗೆ ಹೆಗಲು ಕೊಟ್ಟು ಹೆಜ್ಜೆ ಹಾಕುತ್ತಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಇನ್ನು ಯಾದಗಿರಿಯಲ್ಲಿ ಪಿಎಸ್ಐ ವರ್ಗಾವಣೆಗೆ 40 ಲಕ್ಷ ಹಣವನ್ನು ಶಾಸಕರು ಹಾಗೂ ಅವರ ಮಗನಿಂದ ಬೇಡಿಕೆ ಇಟ್ಟಿದ್ದರು. ಇದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪಿಎಸ್ಐ ಪರಶುರಾಮ್ ಅವರ ಪತ್ನಿ ಜೊತೆ ಈಗಾಗಲೇ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೂರವಾಣಿ ಮೂಲಕ ಮಾತಾಡಿದ್ದಾರೆ.

ಪಾದಯಾತ್ರೆ ಮುಗಿದ ಬಳಿಕ ಅವರಿಗೆ ನ್ಯಾಯ‌ ಕೊಡಿಸುವತ್ತ ಗಮನ ಹರಿಸುತ್ತೇವೆ. ಅಹಿಂದ ಹಿಂದುಳಿದ ವರ್ಗದ ಸಹಕಾರದಿಂದ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ರೆ ಇವತ್ತು ಜನ ಅವರಿಗೆ ಛೀಮಾರಿ ಹಾಕ್ತಿದ್ದಾರೆ. ₹187 ಕೋಟಿ ವಾಲ್ಮೀಕಿ ನಿಗಮದಲ್ಲಿ ಅಕ್ರಮವಾಗಿದೆ. ಸಿಎಂ ಅವರಿಗೆ ನೈತಿಕತೆ ಇದ್ರೆ ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ  ಅಗ್ರಹಿಸಿದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು. ಕುಮಾರಸ್ವಾಮಿ ಅವರು ಸಿನಿಮಾ ಹಂಚಿಕೆದಾರರಾಗಿ ಅವರ ವೃತ್ತಿ ಜೀವನ ಆರಂಭ ಮಾಡಿದ್ರು, ಅದ್ರಲ್ಲಿ ಯಶಸ್ಸು ಕಂಡಿದ್ರು, ಇವತ್ತು ಆಸ್ತಿ ಬಗ್ಗೆ  ಡಿಕೆ ಶಿವಕುಮಾರ್‌ ಅವರು ಮಾತಾಡುತ್ತಿದ್ದಾರೆ. ಇದೆಲ್ಲಾ ರಾಜ್ಯದ ಜನಕ್ಕೆ ಗೊತ್ತಿದೆ. ನಾವು ಬಿಳಿ ಹಾಳೆಯಿದ್ದ ಹಾಗೆ ಯಾವುದೇ ಮುಚ್ಚು ಮರೆ ಮಾಡಿಲ್ಲಾ‌. ಎನ್‌ಡಿಎ ಜೊತೆ ಮೈತ್ರಿಯಾದ ಬಳಿಕ 28 ಲೋಕಸಭೆಯ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರು ಹೊಂದಾಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಅವರು,ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ ನವರು, ಪುಟ್ಟರಾಜು, ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಇಂದ್ರೇಶ್ ಅವರು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಜೊತೆಯಲಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!