ಕಾರವಾರ, (ಆಗಸ್ಟ್.07); ಗೋವಾಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಾಳಿ ನದಿಯಲ್ಲಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆಂದು ವರದಿಯಾಗಿದೆ.
ಕಾರವಾರ ಮತ್ತು ಗೋವಾ ನಡುವೆ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಮಂಗಳವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಕುಸಿದು ಬಿದ್ದಿದೆ.
ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಲಾರಿ ನದಿಗೆ ಬಿದ್ದಿದೆ. ತಕ್ಷಣ ಮೀನುಗಾರರು ಹಾಗೂ ಪೋಲಿಸರು ಲಾರಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.
ಗಾಯಗೊಂಡಿರುವ ವ್ಯಕ್ತಿಯನ್ನು ಕೇರಳ ಮೂಲದ 37 ವರ್ಷದ ರಾಧಾಕೃಷ್ಣ ನಾಳಾ ಸ್ವಾಮಿ ಎಂದು ಗುರುತಿಸಲಾಗಿದೆ. ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇನ್ನು ಘಟನೆ ಸಂಭವಿಸುವ ವೇಳೆ ಬೈಕ್ ಹಾಗೂ ಕಾರು ಕೂಡ ಇದೇ ಸೇತುವೆ ಮೇಲೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದ್ದು ಅವರು ಮುಂದೆ ಸಾಗಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಲಾರಿ ನೀರಿನಲ್ಲಿ ಬಿದ್ದಿದ್ದು ಮತ್ತೆ ಯಾವುದಾದರೂ ವಾಹನ ಬಿದ್ದಿರುವ ಬಗ್ಗೆ ಸ್ಥಳೀಯ ಮೀನುಗಾರರ ಜೊತೆ ಪೊಲೀಸರು ದೋಣಿಗಳ ಮೂಲಕ ಹುಡುಕಾಟ ನಡೆಸಿದ್ದಾರೆ.
ವಿಡಿಯೋ ಕೃಪೆ: amit Updye twitter
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….