ಫೊಕ್ಸೋ ಕೇಸ್ ಎದುರಿಸುತ್ತಿರುವ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ.; ಸಿಎಂ ವಾಗ್ದಾಳಿ| ವಿಡಿಯೋ

ಮೈಸೂರು, (ಆಗಸ್ಟ್.7): ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. 

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.

ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ: ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. 

ಸತ್ಯಕ್ಕೇ ಅಂತಿಮ ಜಯ; ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಸುದ್ದಿಗೋಷ್ಠಿಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]