ನೆಲಮಂಗಲ, (ಆಗಸ್ಟ್ 07): ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘೋರ ದುರಂತವೊಂದು ಸಂಭವಿಸಿದೆ.
ತಾಲೂಕಿನ ಎಡೇಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ.
ಟಿಪ್ಪರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ 30 ವರ್ಷದ ಸಿಂಚನಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….