ಪ್ಯಾರೀಸ್, (ಆಗಸ್ಟ್.07); ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ನಿನ್ನೆ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಅವರು ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ ಎಂದು ವರದಿಯಾಗಿದೆ.
ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ವಿನೇಶ್ ಫೋಗಟ್ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ.
ನಿಯಮಗಳ ಅನ್ವಯ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ಅಂತರರಾಷ್ಟ್ರೀಯ ಸುದ್ದಿ ವಾಹಿನಿ ಎಎನ್ಐ ವರದಿಯಾಗಿದೆ.
ಈಗಾಗಲೇ ಬೆಳ್ಳಿಯ ಪದಕ ಖಚಿತ ಪಡಿಸಿಕೊಂಡಿದ್ದ ಫೋಗಟ್ ಅವರಿಗೆ ಬೆಳ್ಳಿ ಪದಕ ಕೂಡ ಸಿಗುವುದಿಲ್ಲ ಎಂದು ಒಲಿಂಪಿಕ್ಸ್ ಸಮಿತಿ ಖಚಿತಪಡಿಸಿದೆ.
ಈ ಬಾರಿ ಕುಸ್ತಿ ಪಂದ್ಯಾವಳಿಯಲ್ಲಿ ಕೇವಲ ಚಿನ್ನ ಮತ್ತು ಕಂಚಿನ ಪದಕ ಮಾತ್ರ ವಿರಣೆಯಾಗಲಿದೆ. ಇಂದು ರಾತ್ರಿ ಫೈನಲ್ ಪಂದ್ಯ ನಡೆಯಬೇಕಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….