ಪ್ಯಾರಿಸ್, (ಆಗಸ್ಟ್.07): 50 ಕೆಜಿ ಫೋಗಟ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ ವಿನೇಶ್ ಫೋಗಾಟ್ ಅವರು ಕ್ಯೂಬಾ ದೇಶದ ಯುಸ್ನಲೀಸ್ ಗುಜ್ಜನ್ ಲೋಪೆಜ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ. ಫೈನಲ್ ಪ್ರವೇಶಿಸಿದ್ದಾರೆ.
ಈ ಮೂಲಕ ಅವರು ಪದಕ ಖಚಿತಪಡಿಸಿ ಕೊಂಡಿದ್ದಾರೆ. ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಯುಸ್ಸಲೀಸ್ ವಿರುದ್ಧ 5-0 ಗೆದ್ದರು.
ಈ ಹಿಂದೆ ಅವರು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೂರು ಬಾರಿಯ ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತೆ ಉಕ್ರೇನ್ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್ ಪ್ರವೇಶಿಸಿದರು.
ಇದಕ್ಕೂ ಮುನ್ನ ನಡೆದಿದ್ದ ಪ್ರಿಕ್ವಾರ್ಟರ್ ಫೈನಲ್ ಪಂದ್ಯ ದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು. ಈ ಗೆಲುವು ಕಂಡಾಗಲೇ ವಿನೇಶ್ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರ್ಧರಿಸಲಾಗಿತ್ತು. ಇದೀಗ ಸೆಮಿ ಹಂತಕ್ಕೇರಿರುವ ಅವರು ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ.
ಒಲಿಂಪಿಕ್ಸ್ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್‌ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ವಿನೇಶ್ ಚಿನ್ನದ ಪದಕ ಗೆದ್ದು ಬೀಗಿದ್ದರು. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ಅವರು 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು.
ದಾಖಲೆಯ ಗೆಲುವು; ವಿನೇಶ್ ಫೋಗಟ್ ಅವರ ಈ ಗೆಲುವು ವಿಶ್ವಾದ್ಯಂತ ಗಮನ ಸೆಳೆದಿದೆ. ಕ್ವಾ.ಫೈನಲ್ ಎದುರಾಳಿ ಸುಸಾಕಿ ಅವರ ಅಂತಾ ರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಸೋಲು ಇದಾಗಿದೆ.
82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಸುಸಾಕಿ ಎಲ್ಲ ಪಂದ್ಯ ವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾ ಲೋಟಕ್ಕೆ ಭಾರತೀಯ ಕುಸ್ತಿಪಟು ಬ್ರೇಕ್ ಹಾಕುವಲ್ಲಿ ಯಶಸ್ಸು ಕಂಡಿದ್ದು, ವಿಶ್ವಾದ್ಯಂತ ಗಮನ ಸೆಳೆದಿದ್ದಾರೆ.
ಫೋಗಟ್ ಅವಮಾನ; ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡ ಬೇಕಾಯಿತು.
ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಾಟ್ ಸೇರಿದಂತೆ ಆಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು.
ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್ ಅವರೇ ಆಗಿದ್ದರು. ಇದರಿಂದ ಬಿಜೆಪಿ ಬೆಂಬಲಿಗರಿಂದ ಟೀಕೆ, ಅವಮಾನಕ್ಕೂ ಒಳಗಾಗಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….