ಕುವೆಂಪು ಆಶಯದಂತೆ ದೊಡ್ಡಬಳ್ಳಾಪುರದಲ್ಲೊಂದು ಮಂತ್ರ ಮಾಂಗಲ್ಯ ವಿವಾಹ..!

ದೊಡ್ಡಬಳ್ಳಾಪುರ, (ಆಗಸ್ಟ್.11): ಕುವೆಂಪು ಅವರ ಆಶಯದಂತೆ ವಧು-ವರನಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಸದಸ್ಯ ಟಿ.ಎಚ್.ಲವಕುಮಾರ್ ಅವರು ಮಂತ್ರ ಮಾಂಗಲ್ಯ ಬೋಧನೆ ಮಾಡುವ ಮೂಲಕ ನಗರದ ತ.ನ.ಪ್ರಭುದೇವ್ ಅವರ ತೋಟದಲ್ಲಿಂದು ಟಿ.ಎಂ.ಬೃಂದ ಹಾಗೂ ಎಂ.ಫೃಥ್ವಿಕ್ ಘೋರ್ಪಡೆ ಅವರ ವಿವಾಹ ನಡೆಯಿತು.

ಈ ಸಂದರ್ಭದಲ್ಲಿ ವಧು-ವರರನ್ನು ಆರ್ಶೀವದಿಸಿ ಮಾತನಾಡಿದ ಲೇಖಕ ಮಂಜುನಾಥ ಎಂ.ಅದ್ದೆ, ಇತ್ತೀಚಿನ ದಿನಗಳಲ್ಲಿ ವಿವಾಹ ಎನ್ನುವುದು ಎರಡು ಮನಸ್ಸುಗಳ ಒಂದುಗೂಡುವಿಕೆಗಿಂತಲು ತಮ್ಮಲ್ಲಿನ ಸಂಪತ್ತಿನ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಸಾವಿರಾರು ಕೋಟಿ ಖರ್ಚು ಮಾಡುವ ವಿವಾಹಗಳನ್ನು ನಾವಿಂದು ನೋಡುತ್ತಿದ್ದೇವೆ. ಆದರೆ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹದಲ್ಲಿ ಎರಡು ಯುವ ಮನಸ್ಸುಗಳ ಹಾಗೂ ಎರಡು ಕುಟುಂಬಗಳ ಗಟ್ಟಿಯಾದ ಬಾಂಧವ್ಯವನ್ನು ಕಾಣಬುಹುದಾಗಿದೆ ಎಂದರು.  

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತ ಸಂಘದ ಚಳುವಳಿಯಲ್ಲಿ ಕುವೆಂಪು ಅವರ ಮಂತ್ರಮಾಂಗಲ್ಯದ ವಿವಾಹಗಳು ನಡೆಯಬೇಕು ಎನ್ನುವುದು ಒಂದಾಗಿದೆ. ಇದರಿಂದ ರೈತರು ಸಾಲಕ್ಕೆ ಸಿಲುಕುವುದು ತಪ್ಪಲಿದೆ. ಇದೇ ಮಾರ್ಗದಲ್ಲಿ ವಿವಾಹವಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರು ರೈತ ಸಂಘದ ಹೋರಾಟಗಾರರಿಗೆ ಮಾದರಿಯಾಗಿದ್ದಾರೆ ಎಂದರು. 

ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ಸರಳ ಭಾಷೆಯಲ್ಲಿ, ಬದುಕಿನ ಮೌಲ್ಯಗಳನ್ನು ತಿಳಿಸುವ ಕುವೆಂಪು ಅವರ ಮಂತ್ರ ಮಾಂಗಲ್ಯ ವಿವಾಹಗಳು ಸದಾ ಕಾಲಕ್ಕೂ ಆದರ್ಶವಾಗಿದೆ. ರಾಜ್ಯದಲ್ಲಿ ಸಾವಿರಾರು ವಿವಾಹಗಳು ಇದೇ ಆಶಯದಲ್ಲಿ ನಡೆಯುವ ಮೂಲಕ ಸಮೃದ್ದ ಬದುಕನ್ನು ನಡೆಸಿರುವವರು ನಮ್ಮೊಂದಿಗೆ ಇದ್ದಾರೆ ಎಂದರು.

ಬಿಬಿಎಂಪಿ ಯಲಹಂಕ ವಲಯ ಆಯುಕ್ತರಾದ ಸಿ.ಎಸ್.ಕರೀಗೌಡ ಅವರು ಚುಟುಕು ಕವಿ ಎಚ್.ದುಂಡಿರಾಜ್ ಅವರ ಕವನ ‘ರಸ್ತೆಯಲ್ಲಿ ನೋಡಿ ನಕ್ಕಳು ಅವಳು, ಈಗ ನಮ್ಮಿಬ್ಬರಿಗೆ ಇಬ್ಬರು ಮಕ್ಕಳು’ ವಾಚನ ಮಾಡಿ ಇಷ್ಟೇ ಸರಳವಾಗಿರಬೇಕು ವಿವಾಹ ಎನ್ನುವುದೇ ಮಂತ್ರ ಮಾಂಗಲ್ಯದ ಆಶಯವು ಆಗಿದೆ ಎಂದರು. 

ವಿವಾಹ ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಪತ್ರಕರ್ತ ನಾಗಸಂದ್ರ ನಟರಾಜ್ ನೆರವೇರಿಸಿದರು.

ಈ ಸರಳ ವಿವಾಹದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯ ಪುಸ್ತಕವನ್ನು ಉಡುಗರೆಯಾಗಿ ನೀಡಲಾಯಿತು. ರಾಜ್ಯ ರೈತ ಸಂಘದ ಮುಖಂಡರಾದ ಕೆ.ಚುಲೋಚನಮ್ಮ ವೆಂಕಟರೆಡ್ಡಿ,ಕೆ.ಉಮಾ, ಮುತ್ತೇಗೌಡ, ವಿ.ಆರ್.ಗೀತಾವತಿ, ಮುನೇಶ್ವರರಾವ್, ಎಂ.ಪ್ರಜ್ವಲ್ ಹಾಗೂ ರೈತ ಸಂಘದ ಮುಖಂಡರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!