ರಾಜ್ಯ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!| ವೈರಲ್ ವಿಡಿಯೋ ನೋಡಿ

ಬೆಳಗಾವಿ, (ಆಗಸ್ಟ್ 11); ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ  ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರು, ಯಡಿಯೂರಪ್ಪ, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ. 

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ. 

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ. 

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!