ಪತ್ನಿಯ ಕಿರುಕುಳ ಆರೋಪ; ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ

ಚಿತ್ರದುರ್ಗ, (ಆಗಸ್ಟ್.12); ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

ಮೃತನನ್ನು ನಗರದ IUDP ಲೇಔಟ್ ನಿವಾಸಿ, ಜಿಲ್ಲಾ ಆಸ್ಪತ್ರೆಯ ನೌಕರ 38 ವರ್ಷದ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಂಜುನಾಥ್ ಕಳೆದ ಎರಡು ವರ್ಷಗಳ ಹಿಂದೆ ಚೇತನ ಜೊತೆ ವಿವಾಹವಾಗಿದ್ದರು. ಕೌಟುಂಬಿಕ ಕಲಹದ ಹಿನ್ನಲೆ ಮಂಜುನಾಥ್​ಗೆ ಪತ್ನಿ ಚೇತನ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪತ್ನಿ ಚೇತನಾ ವಿರುದ್ದ ಮಂಜುನಾಥ್ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಅತ್ತ ಚೇತನ ಪತಿ ಮುಂಜುನಾಥ್ ವಿರುದ್ದ ಮಹಿಳಾ ಠಾಣೆಗೆ ಹೋಗಿ ದೂರು ನೀಡಿದ್ದಾಳೆ. ಪತ್ನಿ ದೂರು ನೀಡಿದ ವಿಷಯ ತಿಳಿದು ಮನೆಯಲ್ಲಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ

ಮಂಜುನಾಥ್ ಜಿಲ್ಲಾಸ್ಪತ್ರೆ CT ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಬಡವಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….