6000ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಶುಭ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು, (ಆ 12): ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು. 

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ.ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು. 

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ.

ನಾವು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಮೌಡ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದರು.

ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ.

ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು. 

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, MLC ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!