ದೊಡ್ಡಬಳ್ಳಾಪುರ, (ಆಗಸ್ಟ್ 13): ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ 157ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಪ್ರತಿಷ್ಠಿತ ಎಂ.ಎಸ್.ವಿ. ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಚಾಂಪಿಯನ್ ಟ್ರೋಫಿ, ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥೆ ವಿ.ಎ.ಪುಷ್ಪ ನೇತೃತ್ವದಲ್ಲಿ ಎಂಎಸ್‌ವಿ ಪಬ್ಲಿಕ್ ಶಾಲೆಯ 16 ವಿದ್ಯಾರ್ಥಿಗಳು ಸ್ಪರ್ಧಿಸಿದ್ದು, ಇವರಲ್ಲಿ 07 ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿ, 06 ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ 03 ವಿದ್ಯಾರ್ಥಿಗಳು ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಅಬಾಕಸ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಎಂಎಸ್‌ವಿ ಶಾಲೆಯ ಆವರಣದಲ್ಲಿ ಇಂದು ಪದಕ, ಟ್ರೋಫಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶಾಲೆಯ ಸಂಸ್ಥಾಪಕ ಅಧ್ಯಕ್ಷ ಎ.ಸುಬ್ರಹ್ಮಣ್ಯ ಅವರು ವಿತರಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ಮಕ್ಕಳ ಈ ಸಾಧನೆ ಶ್ಲಾಘನೀಯವಾದದ್ದು, ಮಕ್ಕಳ ಶ್ರದ್ಧೆ – ಸಾಧನೆ ಪೋಷಕರಿಗೆ ಹಾಗೂ ಶಾಲೆಗೆ ಹೆಮ್ಮೆ ತಂದಿದೆ. ಮಕ್ಕಳ ಸಾಧನೆ ಇನ್ನೂ ಉನ್ನತ ಮಟ್ಟಕ್ಕೆ ತಲುಪಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಎಂಎಸ್‌ವಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್., ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ ಹಾಗೂ ಶಿಕ್ಷಕ-ಶಿಕ್ಷಕಿಯರು ಇದ್ದರು.
ಚಾಂಪಿಯನ್ ಟ್ರೋಪಿ: ಭುವನ್ ಇ., ದೀಪಕ್ ಎಂ ಎಚ್.,ಅಬ್ದುಲ್ ಕಲಿಕ್, ನೇಹ ಮಹಿ ಸನಾ, ಅಬ್ದುಲ್ ಅಹದ್, ಪ್ರಣೀತ, ಅನ್ಸಿಕಾ.
ಚಿನ್ನದ ಪದಕ: ಜೀವನ್ ಜಿ.ಎ., ಅಶ್ವಿನ್ ಜಿ.ಎಂ., ರುತ್ವಿಜ್, ಶರತ್, ತರುಣ್, ಉದ್ಭವ್ ಗೌಡ.
ಬೆಳ್ಳಿ ಪದಕ: ಭವ್ಯ, ಲಿತನ್, ದೈವಿಕ್ ರಾಮ್.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</