ಸಗಣಿ ಎರಚಿಕೊಂಡು ಓಕುಳಿ ಆಟ..!;| ವಿಡಿಯೋ ನೋಡಿ

ಗದಗ, (ಆಗಸ್ಟ್.13): ಓಕುಳಿ ಆಟ ಅಂದ್ರೆ ತಲೆಯಲ್ಲಿ ಬರೋದು ಬಣ್ಣದೋಕುಳಿ. ರಾಜ ಮಹರಾಜರ ಕಾಲದಲ್ಲಿ ಹಾಲಿನ ಓಕುಳಿಯೂ ನಡೆಯುತ್ತಿತ್ತು ಅನ್ನೋದನ್ನ ಕೇಳಿರ್ತೇವೆ. ಆದ್ರೆ, ಗದಗನಲ್ಲಿ ಸಗಣಿಯ ಓಕುಳಿ (Dung spitting game) ನಡೆಯುತ್ತೆ ಅನ್ನೋದು ವಿಶೇಷವಾಗಿದೆ.

ಗದಗ ನಗರದ ಗಂಗಾಪುರ ಪೇಟೆಯಲ್ಲಿ ಶತಮಾನದಿಂದ ಸಗಣಿ ಆಟದ ವಿಶಿಷ್ಟ ಆಚರಣೆ ನಡೆದುಕೊಂಡು ಬಂದಿದೆ. ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರುದು ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಜನರು. ಮಾರನೇ ದಿನ ಸಗಣಿ ಎರಚಾಟದ ವಿಶಿಷ್ಠ ಆಚರಣೆ ನಡೆಸ್ತಾರೆ.

ವಿಶೇಷ ಓಕುಳಿ ಆಟಕ್ಕೆ ತಿಂಗಳಿಂದ ಪೂರ್ವಭಾವಿಯಾಗಿ ಸಗಣಿ ಸಂಗ್ರಹಣೆ ಕೆಲಸ ನಡೆಯುತ್ತೆ. ದನ ಕರುಗಳಿರುವ ಮನೆಗಳಿಗೆ ತೆರಳುವ ಯುವಕರು ಸಗಣಿ ಸಂಗ್ರಹಿಸುತ್ತಾರೆ.

ಪಂಚಮಿ ಮಾರನೇ ದಿನ ನಡೆಯೋ ಓಕುಳಿಯಲ್ಲಿ ಬಡಾವಣೆ ಜನ ಉತ್ಸಾಹದಿಂದ ಆಚರಿಸ್ತಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಸಗಣಿಯ 20 ಗುಂಪುಗಳನ್ನು ಹಾಕಿ ಅವುಗಳ ಮೇಲೆ ವಿವಿಧ ಬಣ್ಣಗಳನ್ನು ಹಾಕಲಾಗುತ್ತೆ. 12 ರಿಂದ 16 ಜನ ಯುವಕರು ಎರಡು ತಂಡ ರಚಿಸಿ ಹತ್ತಿರದ ದೈವದವರ ತೋಟದಲ್ಲಿ ಸಗಣೆ ಆಟಕ್ಕೆ ಸಿದ್ಧತೆ ನಡೆಸ್ತಾರೆ.

ಚಿತ್ರ ವಿಚಿತ್ರ ಬಟ್ಟೆ ಹಾಕಿಕೊಂಡು ಬದನೆಕಾಯಿ, ಈರುಳ್ಳಿ, ಹಿರೇಕಾಯಿ, ಟೊಮೆಟೊ, ಸೇರಿದಂತೆ ವಿವಿಧ ತರಕಾರಿಗಳಿಂದ ಸಿದ್ಧವಾದ ಹಾರ ಹಾಕಿಕೊಳ್ಳುವ ಯುವಕರು, ತಂಡ ರಚಿಸಿಕೊಂಡು ಪರಸ್ಪರ ಸಗಣಿ ಎರಚಿ ಖುಷಿ ಪಡ್ತಾರೆ.

ರೈತ ಸಮುದಾಯ ಸಗಣಿಗೆ (Dung spitting game) ಬಂಗಾರದ ಸ್ಥಾನಮಾನ ನೀಡುತ್ತೆ. ಪವಿತ್ರತೆಯ ಸಂಕೇತವಾದ ಸಗಣಿಯನ್ನ ಕೀಳರಮೆಯಿಂದ ಕಾಣದೆ ಬಣ್ಣದ ರೀತಿ ಬಳಸುವುದೇ ಈ ಓಕುಳಿ ವಿಶೇಷತೆಯಾಗಿದೆ. ಸಗಣಿ ಮೈಮೇಲೆ ಹಾಕಿಕೊಳ್ಳುವುದರಿಂದ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ನೂರಾರು ವರ್ಷದಿಂದ ನಡೆದುಕೊಂಡು ಬಂದಿರೋ ವಿಶೇಷ ಆಚರಣೆ ಇಂದಿಗೂ ಮುಂದುವರೆದಿದೆ. ಸಾಂಸ್ಕೃತಿಕ ಸಂಕೇತದಿಂತಿರುವ ಸಗಣಿ ಓಕುಳಿ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆ ಹೆಚ್ಚಿಸಿಕೊಳ್ಳುತ್ತಿದೆ. ಗೋ ಮಾತೆಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಹಾಗೂ ಪೂರ್ವಿಕರ ಸಂಸ್ಕೃತಿ ಮುಂದುವರೆಸಿಕೊಂಡು ಹೋಗ್ತಿರೋದು ನಿಜಕ್ಕೂ ವಿಶೇಷವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!