ದೊಡ್ಡಬಳ್ಳಾಪುರ, (ಆಗಸ್ಟ್ 13); ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರೈತನೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬಳ್ಳಾಪುರ- ದಾಬಸ್ಪೇಟೆ ನಡುವಿನ ಹುಲಿಕುಂಟೆ ಬಳಿ ಸಂಭವಿಸಿದೆ.
ಮೃತ ರೈತನನ್ನು ಹುಲಿಕುಂಟೆ ಕಾಲೋನಿ ನಿವಾಸಿ 60 ವರ್ಷದ ನಾರಾಯಣಪ್ಪ ಎಂದು ಗುರುತಿಸಲಾಗಿದೆ.
ಡೈರಿಗೆ ಹಾಲು ಹಾಕಿ ಮನೆಗೆ ಮರಳುತ್ತಿದ್ದ ವೇಳೆ ಅಪರಿಚಿತ ಬೊಲೇರೋ ಗೋಡ್ಸ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕರ್ ಡಾ.ಎಂ.ಬಿ.ನವೀನ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….