ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವದಂತಿ: ಸಚಿವ ಪರಮೇಶ್ವರ್ ಹೇಳಿದ್ ಏನು ನೋಡಿ| ವಿಡಿಯೋ

ಬೆಂಗಳೂರು, (ಆಗಸ್ಟ್ 14): ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.‌13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದರು. 

ಮೂಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನು ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಕ್ಯಾಬಿನೆಟ್ ತೀರ್ಮಾನಿಸಿ ರಾಜ್ಯಪಾಲರಿಗೆ ಸಲಹೆ ಮಾಡಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು‌.

ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ. ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದರು.

ಭೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ.‌‌ ಎಲ್ಲವನ್ನು ತಾರ್ಕಿಕ ಅಂತ್ಯಕ್ಕೆ ತರಬೇಕು‌‌ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!