ರಾಯಚೂರು, (ಆಗಸ್ಟ್.13): ಮಕ್ಕಳಿಗೆ ವಿದ್ಯೆ ಕಲಿಸಲೆಂದು ಶಾಲೆಗಳಿಗೆ ತೆರಳುವ ಶಿಕ್ಷಕಿಯರು, ಇತ್ತೀಚಿನ ದಿನಗಳಲ್ಲಿ ಕೆಲ ಶಾಲೆಗಳಲ್ಲಿ ತೀವ್ರವಾದ ಕಿರುಕುಳ ಎದುರಿಸಬೇಕಾದ ಅನಿವಾರ್ಯತೆ ಎದುರಾಗುತ್ತಿರುವ ಆರೋಪ ವ್ಯಾಪಕವಾಗಿದೆ.

ಕೆಲ ಶಾಲೆ, ಕಾಲೇಜುಗಳಲ್ಲಿ ಪ್ರಾಂಶುಪಾಲ, ಮುಖ್ಯ ಶಿಕ್ಷಕ, ಇತರೆ ಸಿಬ್ಬಂದಿಗಳಿಂದ ಶಿಕ್ಷಕಿಯರು ಕಿರುಕುಳ, ಅವರೇಳಿದಂತೆ ಕೇಳದಿದ್ದರೆ ಟಾರ್ಗೆಟ್ಗೆ ಒಳಗಾಗುತ್ತಿದ್ದಾರೆ ಎಂಬ ಆಕ್ರೋಶದ ನಡುವೆ, ರಾಯಚೂರಿನಲ್ಲಿ ಶಿಕ್ಷಕಿಗೆ ಅಶ್ಲೀಲವಾಗಿ ಸಂದೇಶ ಮಾಡಿದ ಕಾರಣ, ಶಿಕ್ಷಕನೋರ್ವ ಬಟ್ಟೆ ಹರಿದು ಹೋಗುವಂತೆ ಬಡಿಸಿಕೊಂಡ ಘಟನೆ ವರದಿಯಾಗಿದ್ದು, ಶಿಕ್ಷಕಿಯರ ಟಾರ್ಗೆಟ್ ಮಾಡಿ ಕಿರುಕುಳ ನೀಡುವವರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ.

ರಾಯಚೂರು ಜಿಲ್ಲೆಯ ಹೊರವಲಯದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಮೆಹಬೂಬ್ ಅಲಿ ಎಂಬುವವರಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದು, ಶಿಕ್ಷಕಿಯ ಕಾಲಿಗೆ ಬೀಳಿಸಿ ಕ್ಷಮೆ ಕೇಳಿಸಿದ್ದಾರೆ.
ಶಾಲಾ ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಶಿಕ್ಷಕಿಯ ಸಂಬಂಧಿಕರು ಸಹ ಶಿಕ್ಷಕನ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಧರ್ಮದೇಟು ಕೊಟ್ಟು ಕ್ಷಮೆ ಕೇಳುವಂತೆ ಮಾಡಿದ ಘಟನೆ ನಡೆದಿದೆ.
ಸಹ ಶಿಕ್ಷಕ ಮೆಹಬೂಬ್ ಅಲಿ ಅವರು ತಮ್ಮದೇ ಶಾಲೆಯ ಅತಿಥಿ ಶಿಕ್ಷಕಿಗೆ ಅಸಹ್ಯವಾಗಿ ಮೆಸೇಜ್ ಮಾಡಿ, ಮಂಚಕ್ಕೆ ಕರೆದಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಶಾಲೆ ಬಳಿ ಬಂದಿದ್ದ ಶಿಕ್ಷಕಿ ಸಂಬಂಧಿಕರು ಮೆಹಬೂಬ್ ಅಲಿ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಧರ್ಮದೇಟು ನೀಡಿ ಸಭ್ಯತೆಯ ಪಾಠ ಕಳಿಸಿದ್ದಾರೆ.
ಸದ್ಯ ಮೆಹಬೂಬ್ ಅಲಿ ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆಯಾಚನೆ ಮಾಡಿದ್ದಾರೆ. ಕೊನೆಗೆ ತಪ್ಪೊಪ್ಪಿಗೆ ಪತ್ರ ಬರೆದು ಕ್ಷಮೆ ಕೇಳಿದ್ದಾರೆ. ಶಿಕ್ಷಕ ಕ್ಷಮೆಯಾಚಿಸಿದ್ದರಿಂದ ಪೊಲೀಸರಿಗೆ ದೂರು ನೀಡದೇ ಶಿಕ್ಷಕಿ ಸುಮ್ಮನಾಗಿದ್ದಾರೆ.
ಇದೀಗ ಶಿಕ್ಷಕ, ಶಿಕ್ಷಕಿ ಕಾಲಿಗೆ ಬಿದ್ದು ಕ್ಷಮೆ ಕೇಳುವ ವಿಡಿಯೋ ವೈರಲ್ ಆಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
