ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಸಿ.ದಿನಕರ್ ಭಾಗಿ..!

ದೊಡ್ಡಬಳ್ಳಾಪುರ, (ಆಗಸ್ಟ್.15); ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಸಿ.ದಿನಕರ್ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, “ಮಕ್ಕಳಾದ ತಾವುಗಳು ಚೆನ್ನಾಗಿ ಓದಿ ಭಾರತೀಯ ರಕ್ಷಣಾ ವ್ಯವ್ಯಸ್ಥೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಮತ್ತು ದೇಶಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. 

ಪ್ರತಿ ವಿದ್ಯಾರ್ಥಿಯು ಸಮಯ ಪಾಲನೆ, ಮಹಿಳೆ ಮತ್ತು ಗುರು ಹಿರಿಯರಿಗೆ ಗೌರವ, ವೈಯಕ್ತಿಕ ಸ್ವಚ್ಛತೆ, ನಿರಂತರ ಪ್ರಯತ್ನ, ಮೌಲ್ಯಯುತ ವಿಚಾರಗಳು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎ.ಸುಬ್ರಹ್ಮಣ್ಯ ಮಾತನಾಡಿ, “ಭಾರತ ದೇಶ ಇಂದು ಜಗದ್ವಿಖ್ಯಾತಿಯನ್ನು ಪಡೆಯುತ್ತಿರುವ ರಾಷ್ಟ್ರವಾಗಿದೆ. ದೇಶದ ಯುವಕರಿಗೆ ದೇಶ ಬದಲಾಯಿಸುವ ಸಾಮರ್ಥ್ಯವಿರುತ್ತದೆ. ಪ್ರತಿ ರಂಗದಲ್ಲಿಯೂ ಇಂದು ದೇಶ ಅಭಿವೃದ್ಧಿ ಹೊಂದುತ್ತಿರುವುದು ಯುವ ಶಕ್ತಿಯ ಇಚ್ಛಾಶಕ್ತಿ, ಉತ್ತಮ ಆಡಳಿತ ಹಾಗೂ ಪ್ರತಿಯೊಬ್ಬರ ಹೃದಯ ದೇಶಾಭಿಮಾನದಿಂದ ಮಾತ್ರ. 

ದೇಶವನ್ನು 200 ವರ್ಷಗಳ ಕಾಲ ಬ್ರಿಟೀಷರ ಕಪಿಮುಷ್ಠಿಯಿಂದ ನಮ್ಮ ದೇಶ ಸ್ವಾತಂತ್ರ ಪಡೆದ ಸಂಭ್ರಮ. ಅದಕ್ಕಾಗಿ ದೇಶದ ಜನ ವೈಯಕ್ತಿಕ ಜೀವನದ ಸ್ವಾತಂತ್ರ್ಯ ಬದಿಗೊತ್ತಿ ದೇಶಕ್ಕೆ ಸ್ವಾತಂತ್ರ ದೊರಕಿಸಿಕೊಡುವಲ್ಲಿ ತಮ್ಮ ಜೀವನ-ಜೀವವನ್ನು ತ್ಯಾಗ ಮಾಡಿದ್ದು, ಇವೆಲ್ಲವನ್ನೂ ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ಸುದಿನ ಇದು. ಅವರು ತಂದು ಕೊಟ್ಟ ಸ್ವಾತಂತ್ರ್ಯವನ್ನು ನಾವು ಸವಿಯುತ್ತಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವುದರ ಜೊತೆಗೆ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮ ಕರ್ತವ್ಯವಾಗಿದೆ” ಎಂದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಬೋಧಕೇತರ ಸಿಬ್ಬಂದಿಯಾದ  ನಾರಾಯಣ ಗೌಡ ಅವರ ಕಾರ್ಯದಕ್ಷತೆ, ಸೇವಾ ಸಮರ್ಪಣೆ ಹಾಗೂ ಆದರ್ಶಗಳಿಗಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್., ಆಡಳಿತಾಧಿಕಾರಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ, ಶಿಕ್ಷಕವೃಂದ, ಮಕ್ಕಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ಮಹಾನ್ ನಾಯಕರ ವೇಷಭೂಷಣಗಳು, ದೇಶಭಕ್ತಿ ಗೀತೆ, ನೃತ್ಯ, ಹಾಗೂ ಪಿರಾಮಿಡ್ ಶೋ ಗಳು ನೋಡುಗರ ಮನಸೂರೆಗೊಂಡವು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆಗೆ ಸೋಲು; ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲ

ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದ್ದಾರೆ.

[ccc_my_favorite_select_button post_id="121096"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!