ಕೆಎಎಸ್ ಪೂರ್ವಭಾವಿ ಪರೀಕ್ಷೆ ವಿವಾದ: ಚಿತ್ರಹಿಂಸೆಗೆ ಒಳಪಡಿಸಿ ಪರೀಕ್ಷೆ ನಡೆಸುವ ಆತುರ, ದುರುದ್ದೇಶ ಏಕೆ?; ಹೆಚ್‌ಡಿಕೆ ಪ್ರಶ್ನೆ

ನವದೆಹಲಿ, (ಆಗಸ್ಟ್.15); ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ತಿಂಗಳ 27ರಂದು 2023-24ರ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು;  ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಇಂದು ಹೇಳಿದ್ದಾರೆ.

ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದಿದ್ದಾರೆ ಕೇಂದ್ರ ಸಚಿವರು.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ.

ರಾಜ್ಯ ಸರಕಾರ ಹಾಗೂ ಕೆಪಿಎಸ್ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಅವರು ಆಗ್ರಹಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!