ದೊಡ್ಡಬಳ್ಳಾಪುರ, (ಆಗಸ್ಟ್.15); ಹೆಮ್ಮೆಯ ಭಾರತ ದೇಶದ 78ನೇ ಸ್ವಾತಂತ್ರ್ಯೋತ್ಸವವನ್ನು ನಗರದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಇದೇ ವೇಳೆ 25ನೇ ಕಾರ್ಗಿಲ್ ವಿಜಯೋತ್ಸವದ ಸಂಭ್ರಮವನ್ನು ಕಾರ್ಗಿಲ್ ಯುದ್ಧ ಭೂಮಿಯ ಪ್ರತಿಕೃತಿಯನ್ನು ವಿದ್ಯಾರ್ಥಿಗಳೇ ರಚಿಸಿ ವೀರಯೋಧರಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಶಾಲಾ ಕಾರ್ಯದರ್ಶಿ ಅನುರಾಧಾ ಕೆ.ಆರ್ ಅವರು ಮಾತನಾಡಿ, ಸ್ವಾತಂತ್ರ್ಯದ ಶತಮಾನದ ವರ್ಷವಾದ 2047ರ ಹೊತ್ತಿಗೆ ನಮ್ಮ ದೇಶವನ್ನು ವಿಕಸಿತ ಭಾರತ- ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಎಲ್ಲರೂ ಶ್ರಮವಹಿಸಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿನಿ ಸ್ವಾತಿ ವಿಶ್ವಕರ್ಮ ವಾಯಲಿನ್ ನಲ್ಲಿ ರಾಷ್ಟ್ರಗೀತೆಯನ್ನು ನುಡಿಸಿದ್ದು ಮನಸೂರೆಗೊಳಿಸಿತು.
ಶಾಲೆಯ ಬಹಳಷ್ಟು ವಿದ್ಯಾರ್ಥಿಗಳು ಸೈನಿಕರ ಸಮವಸ್ತ್ರ ಧರಿಸಿದ್ದು ವಿಶೇಷವಾಗಿತ್ತು. ನೂರಾರು ಪುಟಾಣಿ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರ ನಾಯಕರ ಹಾಗು ಮಿಲಿಟರಿ ಸಮವಸ್ತ್ರ ಧರಿಸಿದ್ದು ನೋಡುಗರ ಮನಸ್ಸು ಸೂರೆಗೊಂಡಿತ್ತು.
ಅತ್ಯಂತ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಅನಿತಾ ಕೆ.ಪಿ., ಸುನಿತಾ.ಪಿ., ಗುರುವರ್ಗದವರು ಸಾವಿರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
