78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ಶುಭಕೋರಿದ ಗಣ್ಯರು

ಬೆಂಗಳೂರು, (ಆಗಸ್ಟ್.15): ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರುಗಳು, ದೇಶದ ಜನತೆಗೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ಕೋರಿದ್ದಾರೆ.

ಪ್ರಧಾನಿ ಮೋದಿ: ನನ್ನ ಸಹ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ; ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗದೆ, ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು. 

ಪ್ರಜೆಗಳಾಗಿ ನಾವು ಪ್ರತಿಕ್ಷಣವೂ ಜಾಗೃತರಾಗಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದಮನ ಮಾಡುವ ದುಷ್ಟಶಕ್ತಿಗಳ ಕುಟಿಲ ಪ್ರಯತ್ನವನ್ನು  ವಿಫಲಗೊಳಿಸಿ ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ.

ಸ್ವಾತಂತ್ರ್ಯದ ಈ ಸಂಭ್ರಮದ ಸಂದರ್ಭದಲ್ಲಿ ಪರಸ್ಪರ ಸಾಮರಸ್ಯ, ಸೌಹಾರ್ದವನ್ನು ಇನ್ನಷ್ಟು ಬಲಪಡಿಸುವ, ಆ ಮೂಲಕ ದಾರ್ಶನಿಕರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯುವ ಸಂಕಲ್ಪ ಮಾಡಬೇಕಾಗಿದೆ. 

ಸಾವಿರಾರು ಮಹನೀಯರ ಹೋರಾಟ, ತ್ಯಾಗ, ಪರಿಶ್ರಮಗಳ ಫಲವನ್ನು ನಾವು ಇಂದು ಉಣ್ಣುತ್ತಿದ್ದೇವೆ. ಇಂದು ನಮ್ಮ ಕೈಯಲ್ಲಿರುವ ಸ್ವಾತಂತ್ರ್ಯದ ದೀವಿಗೆಯನ್ನು ಮುಂದಿನ  ತಲೆಮಾರಿಗೆ ಜತನದಿಂದ ತಲುಪಿಸುವ ಅತ್ಯಂತ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ನಾವು ಮುನ್ನಡೆಯಬೇಕಿದೆ.

ನಾಡಿನ ಸಮಸ್ತರಿಗೂ ಮತ್ತೊಮ್ಮೆ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದಿದ್ದಾರೆ.

ಡಿಕೆ ಶಿವಕುಮಾರ್: ಸಮಸ್ತರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸೋಣ. ಸಮೃದ್ಧ, ಸಶಕ್ತ ನವಭಾರತದ ನಿರ್ಮಾಣದ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮುನ್ನಡೆಯೋಣ. ಜೈ ಹಿಂದ್! ಎಂದಿದ್ದಾರೆ.

ಹೆಚ್‌ಡಿ ಕುಮಾರಸ್ವಾಮಿ: ಭಾರತದ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ದಿವ್ಯಚೇತನಗಳ ಚರಣಗಳಿಗೆ ನನ್ನ ಪ್ರಣಾಮಗಳು.

ಗೌರವಾನ್ವಿತ ಪ್ರಧಾನಿಗಳಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಶಕ್ತ, ಸದೃಢ, ಶ್ರೇಷ್ಠ ರಾಷ್ಟ್ರವಾಗಿ ಅವತರಿಸಿ ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಭಾರತದ ಯಶೋಗಾಥೆಯನ್ನು ಸಂಭ್ರಮಿಸುತ್ತಾ, ಹೊಸ ಕನಸುಗಳೊಂದಿಗೆ ಮುನ್ನಡೆಯೋಣ. ಜೈ ಹಿಂದ್ ಎಂದಿದ್ದಾರೆ.

ಬಿವೈ ವಿಜಯೇಂದ್ರ: ‘ಸಹಸ್ರಾರು ದೇಶಭಕ್ತರ ತ್ಯಾಗ ಮತ್ತು ಬಲಿದಾನದ ಫಲವೇ ಸ್ವಾತಂತ್ರ್ಯ’. ಸ್ವಾಭಿಮಾನಿ, ಸ್ವಾವಲಂಬಿ, ಸಾಂಸ್ಕೃತಿಕ, ವಿಶ್ವಗುರು ಹಾಗೂ ವಿಕಸಿತ ಭಾರತವಾಗುತ್ತಿರುವ ಈ ಸಂದರ್ಭದಲ್ಲಿ ದೇಶದ ಐಕ್ಯತೆ ಹಾಗೂ ಏಳಿಗೆಗಾಗಿ ಶ್ರಮಿಸುವ ಸಂಕಲ್ಪ ಮಾಡೋಣ.

ನಾಡಿನ ಸಮಸ್ತ ಜನತೆಗೆ 78 ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದಿದ್ದಾರೆ.

ಬಸವರಾಜ ಬೊಮ್ಮಾಯಿ: ಸಮಸ್ತ ಭಾರತೀಯರಿಗೆ ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯಹಾರ್ದಿಕ ಶುಭಾಶಯಗಳು.

ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!