ಹಾಸನ, (ಆಗಸ್ಟ್.15): ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ನಡೆದಿದೆ.
ಮೃತರನ್ನು 43 ವರ್ಷದ ಶ್ರೀನಿವಾಸ್ ಕಾರು ಚಾಲಕನಾಗಿದ್ದ, ಇವರ ಪತ್ನಿ 36 ವರ್ಷದ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು, ಪುತ್ರಿ 13 ವರ್ಷದ ನಾಗಶ್ರೀ ಎಂದು ಗುರುತಿಸಲಾಗಿದೆ.
ಕಳೆದ ಮೂರು ದಿನದಿಂದ ಈ ಮೂವರು ಕಾಣೆಯಾಗಿದ್ದರು. ಈ ಸಂಬಂಧ ಸಂಬಂಧಿಕರು ಠಾಣೆಗೆ ದೂರು ನೀಡಿದ್ದರು.
ಸಾಲ ಬಾಧೆಗೆ ಬೇಸತ್ತು ಹೇಮಾವತಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುಮುದ್ಲಾಪುರ ಬಳಿಯ ನಾಲೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….