ಬೆಂಗಳೂರು, (ಆಗಸ್ಟ್.15): ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಜಟ್ಟಿಗನಹಳ್ಳಿ ನಿವಾಸಿ 30 ವರ್ಷದ ಗೌರಿ ಕೊಲೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಮೃತಳ ಪತಿ ನಾಗೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ಪ್ರದೇಶದಲ್ಲಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ.
ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದರು. ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದು, ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….