ನವದೆಹಲಿ, (ಆಗಸ್ಟ್.16); ಚುನಾವಣಾ ಆಯೋಗವು ಇಂದು ಮಧ್ಯಾಹ್ನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ.
ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗಳಿಗೆ ಚುನಾವಣೆಗಳು ನಡೆಯಲಿದ್ದು, ಚುನಾವಣಾ ಆಯೋಗವು ಇಂದು ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಬಹುದು ಎನ್ನಲಾಗುತ್ತಿದೆ.
ಹರಿಯಾಣದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರವಿದೆ.
ಜಾರ್ಖಂಡ್‌ನಲ್ಲಿ ಸೋರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ-ಕಾಂಗ್ರೆಸ್ ಮೈತ್ರಿಯೊಂದಿಗೆ ಆಡಳಿತ ನಡೆಸುತ್ತಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ 2014 ರಿಂದ ಚುನಾವಣೆ ನಡೆದಿಲ್ಲ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….