ದೊಡ್ಡಬಳ್ಳಾಪುರ, (ಆಗಸ್ಟ್.16); ಈ ವರ್ಷ ನೀರು ಬರುತ್ತದೆ. ಮುಂದಿನ ವರ್ಷ ಬರುತ್ತದೆ… ಹೀಗೆ ವರ್ಷದಿಂದ ವರ್ಷಕ್ಕೆ ಎತ್ತಿನಹೊಳೆ ನೀರಿನ ಬಗ್ಗೆ ‘ಭರವಸೆ’ ಹೊಂದಿ ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಜನರು ದಿನದೂಡುತ್ತಿದ್ದಾರೆ.
ಈ ನಡುವೆ ದೊಡ್ಡಬಳ್ಳಾಪುರ ತಾಲೂಕಿನ ಹಣಬೆ ಬಳಿ ಎತ್ತಿನಹೊಳೆ ಯೋಜನೆಯ ಪೈಪ್ಲೈನ್ ಅಳವಡಿಕೆ ವೇಳೆ ದುರ್ಘಟನೆ ಸಂಭವಿಸಿದ್ದು ಓರ್ವ ಕಾರ್ಮಿಕ ಸಾವನಪ್ಪಿದ್ದಾನೆ.
ಹಣಬೆ ಹೊರವಲಯದಲ್ಲಿ ಎತ್ತಿನಹೊಳೆ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಇಂದು ನಡೆಯುತ್ತಿದ್ದ ಪೈಪ್ ಗಳ ಜೋಡಣೆ ವೇಳೆ ಮಣ್ಣು ಕುಸಿದ ಪರಿಣಾಮ ಪೈಪಿನಡಿ ಸಿಲುಕಿ ಬಿಹಾರ ರಾಜ್ಯದ ನೇತ್ಯಾಲಿ ಮೂಲದ ಚಿಲ್ಟು ಕುಮಾರ (22ವರ್ಷ) ಎಂಬ ಯುವಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ.
ವಿಷಯ ತಿಳಿದ ಸ್ಥಳೀಯರು ದೊಡ್ಡಬೆಳವಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಸೂಕ್ತ ಮುಂಜಾಗ್ರತೆ ವಹಿಸದ ಗುತ್ತಿಗೆದಾರರ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….