ದೊಡ್ಡಬಳ್ಳಾಪುರ ಸಮೀಪದ ಫಾಕ್ಸ್ ಕಾನ್ ಕಂಪನಿಗೆ ಸಂಪೂರ್ಣ ಸಹಕಾರ, ಹೆಚ್ಚಿನ ಹೂಡಿಕೆಗೆ ಕರೆ, 40 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಭರವಸೆ

ಬೆಂಗಳೂರು: ದೊಡ್ಡಬಳ್ಳಾಪುರದ ಬಳಿ 25 ಸಾವಿರ ಕೋಟಿ ರೂ. ಹೂಡಿಕೆ ಮೂಲಕ ತನ್ನ ಬೃಹತ್ ಉತ್ಪಾದನಾ ಘಟಕ ಸ್ಥಾಪಿಸುತ್ತಿರುವ ತೈವಾನ್ ಮೂಲದ ಫಾಕ್ಸ್ ಕಾನ್ ಕಂಪನಿಗೆ ಅಗತ್ಯ ಮೂಲಸೌಲಭ್ಯಗಳ ಜೊತೆಗೆ ಎಲ್ಲ ನೆರವನ್ನೂ ಕೊಡಲಾಗುವುದು. ಇದಲ್ಲದೆ,  ರಾಜ್ಯದಲ್ಲಿ ಇನ್ನೂ ಹೆಚ್ವು ಹೆಚ್ಚು ಹೂಡಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಫಾಕ್ಸ್ ಕಾನ್ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗಕ್ಕೆ ಶುಕ್ತವಾರ ರಾತ್ರಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

ಫಾಕ್ಸ್ ಕಾನ್ ಕಂಪನಿಗೆ ರಾಜ್ಯ ಸರಕಾರದ ವತಿಯಿಂದ ಸಂಪೂರ್ಣ ಸಹಕಾರ ಕೊಡಲಾಗುವುದು. ನೀರು, ವಿದ್ಯುತ್, ರಸ್ತೆ, ಕಾನೂನು ಮತ್ತು ಇತ್ಯಾದಿಗಳನ್ನೆಲ್ಲ ನಾವು ಒದಗಿಸಲಿದ್ದೇವೆ. ಕಂಪನಿಯು ಫ್ಯಾಬ್ ಉದ್ಯಮ ವಲಯ ಸೇರಿದಂತೆ ಮಿಕ್ಕ ವಲಯಗಳಲ್ಲೂ ಹೆಚ್ಚು ಹೂಡಿಕೆ ಮಾಡಲು ಒಲವು ತೋರಿಸಬೇಕು. ರಾಜ್ಯವು ಅತ್ಯುತ್ತಮ ಮೌಲ್ಯಗಳಿಂದ ಕೂಡಿರುವ ಕೈಗಾರಿಕಾ ಸಂಸ್ಕೃತಿಯನ್ನು ಹೊಂದಿದೆ. ರಾಜ್ಯವು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಒತ್ತು ಕೊಟ್ಟಿದೆ ಎಂದು ಅವರು ಆಶ್ವಾಸನೆ ನೀಡಿದರು.

ಇದಕ್ಕೆ ಸ್ಪಂದಿಸಿದ ಯಂಗ್ ಲಿಯು, `ರಾಜ್ಯದಲ್ಲಿ ಸದ್ಯದಲ್ಲೇ ಕಾರ್ಯಾಚರಣೆ ಆರಂಭಿಸಲಿರುವ ಘಟಕವು ಚೀನಾದ ನಂತರದ ಎರಡನೇ ಅತ್ಯಂತ ಬೃಹತ್ ಘಟಕವಾಗಿದೆ. ಇಲ್ಲಿ 40,000 ಮಧ್ಯಮ ಸ್ತರದ ವಿದ್ಯಾವಂತರಿಗೆ ಉದ್ಯೋಗಾವಕಾಶ ಸಿಗಲಿದೆ. ಇವರನ್ನು ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಜತೆಗೆ ನಮ್ಮ ಹೂಡಿಕೆ ಇಷ್ಟಕ್ಕೇ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಪರಸ್ಪರ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು’ ಎಂದರು.

ಉದ್ಯೋಗಿಗಳಿಗೆ ಮನೆಗಿಂತಲೂ ಹೆಚ್ಚಿನ ನೆಮ್ಮದಿಯ ವಾತಾವರಣ ಇರಲಿದೆ. ಇವರಿಗೆ ಗುಣಮಟ್ಟದ ಮನೋರಂಜನೆ, ಜಿಮ್, ವಸತಿ ಸೌಲಭ್ಯ, ಆಹಾರ ಎಲ್ಲವನ್ನೂ ಫಾಕ್ಸ್ ಕಾನ್ ಕಂಪನಿ ಒದಗಿಸಲಿದೆ. ಈ ಮೂಲಕ ಜಾಗತಿಕ ಗುಣಮಟ್ಟದ ಕೈಗಾರಿಕಾ ಪರಿಸರವನ್ನು ನಿರ್ಮಿಸಲಾಗುವುದು ಎಂದು ಅವರು ನುಡಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, `ರಾಜ್ಯವು ಹೆಚ್ಚಿನ ಹೂಡಿಕೆಯನ್ನು ಮುಕ್ತವಾಗಿ ಸ್ವಾಗತಿಸಲಿದೆ. ಕೆಐಎಡಿಬಿ, ಕೆಪಿಟಿಸಿಎಲ್, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿಗಳು ಫಾಕ್ಸ್ ಕಾನ್ ಕಂಪನಿಯ ಯೋಜನೆಯು ಸುಗಮವಾಗಿ ಅನುಷ್ಠಾನಕ್ಕೆ ಬರುವ ನಿಟ್ಟಿನಲ್ಲಿ ಬದ್ಧತೆಯಿಂದ ಶ್ರಮಿಸುತ್ತಿವೆ. ಕಂಪನಿಗೆ ಈಗಾಗಲೇ 300 ಎಕರೆ ಭೂಮಿಯನ್ನು ಕೊಡಲಾಗಿದೆ’ ಎಂದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ರಾಜ್ಯವು ದೇಶದಲ್ಲೇ ಅತ್ಯುತ್ತಮವಾದ ಉದ್ಯಮಸ್ನೇಹಿ ನೀತಿಯನ್ನು ಹೊಂದಿದ್ದು, ಫಾಕ್ಸ್ ಕಾನ್ ಕಂಪನಿಯು ಇಲ್ಲಿಗೆ ಬರುತ್ತಿರುವುದು ಸ್ವಾಗತಾರ್ಹವಾಗಿದೆ’ ಎಂದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಐಟಿ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!