ದೊಡ್ಡಬಳ್ಳಾಪುರ, (ಆಗಸ್ಟ್.16); ಕಬಡ್ಡಿ ಆಟವು ಗಂಡುಗಲಿಗಳ ದೇಶಿ ಆಟವಾಗಿದ್ದು, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬಿ.ಎಸ್.ಎಲ್.ಕಬಡ್ಡಿ ಕ್ಲಬ್ ಹಾಗೂ ಮುತ್ತೂರು ಗ್ರಾಮಸ್ಥರ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನೇಪಥ್ಯಕ್ಕೆ ಸರಿಯುವ ಹಂತದಲ್ಲಿರುವ ಕಬಡ್ಡಿ ಆಟಕ್ಕೆ ಸರ್ಕಾರ ಪ್ರೋತ್ಸಾಹ ನೀಡಿ ಮತ್ತೆ ತನ್ನ ವೈಭವವನ್ನು ಉಳಿಸಿಕೊಳ್ಳುವಂತೆ ಮಾಡಬೇಕಿದೆ. ಸೋಲು-ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೇ ಕ್ರೀಡೆಯಲ್ಲಿ ಸಕ್ರಿಯರಾಗುವುದು. ಕ್ರೀಡಾಸ್ಫೂರ್ತಿಯನ್ನು ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ.
ಕ್ರೀಡಾಸ್ಫೂರ್ತಿಯಿಂದ ಭಾಗವಹಿಸುವುದರಿಂದ ಕ್ರೀಡಾಪಟು ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಸಾಕಷ್ಟು ಪ್ರೋತ್ಸಾಹ-ನೆರವು ದೊರೆಯುತ್ತಿದೆ. ಇದರಿಂದ ಕ್ರೀಡಾಕ್ಷೇತ್ರವು ಬಲಿಷ್ಠವಾಗಲು ಸಾಧ್ಯವಾಗಲಿದೆ.
ಸರ್ಕಾರಗಳು ಕ್ರೀಡಾಪಟುಗಳಿಗೆ ಸಾಕಷ್ಟು ಪ್ರಮಾಣದಲ್ಲಿ ನೆರವು ನೀಡುತ್ತಿದೆ. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಕ್ರೀಡೆಯು ಮಹತ್ವದ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಸಕ್ರಿಯರಾಗಬೇಕು ಎಂದು ಕರೆ ನೀಡಿದರು.
ಅಲ್ಲದೆ ಈ ಒಂದು ಕ್ರೀಡೆಯಲ್ಲಿ ಆಸಕ್ತಿ ತೋರಿ ದೂರದ ಊರುಗಳಿಂದ ಸುಮಾರು 50 ತಂಡಗಳು ಭಾಗವಹಿಸಿರುವುದು ಪ್ರಶಂಸನೀಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಹೆಚ್.ಅಪ್ಪಯ್ಯಣ್ಣ, ಮುಖಂಡರಾದ. ದಾಸಗೊಂಡನಹಳ್ಳಿ ಚಂದ್ರಣ್ಣ, ಕಾಂತಾಮಣಿ ಹರೀಶ್ ಗೌಡ, ಬಿ.ಎಚ್.ಕೆಂಪಣ್ಣ, ಕೋನಘಟ್ಟ ಆನಂದ್, ದೊಡ್ಡ ತುಮಕೂರು ಪ್ರಭಾಕರ್, ತಳವಾರ್ ನಾಗರಾಜು, ಪ್ರವೀಣ್ ಶಾಂತಿನಗರ, ನಾರಾಯಣಪ್ಪ, ಹರ್ಷ, ಕೇಶವ ಮೂರ್ತಿ ಮತ್ತಿತರರಿದ್ದರು.
ಈ ಪಂದ್ಯಾವಳಿಯಲ್ಲಿ 50 ತಂಡಗಳು ಭಾವಹಿಸಿದ್ದು, ಮೊದಲನೇ ಬಹುಮಾನ ಕೋಲಾರ ತಂಡ ತನ್ನದಾಗಿಸಿಕೊಂಡಿತು. ಉಳಿದಂಯೆ ಎರಡನೆಯ ಬಹುಮಾನ ಬಿ.ಎಸ್ ಎಲ್.( ಎ) ತಂಡ ಮುತ್ತೂರು, ಮೂರನೆಯ ಬಹುಮಾನ ಕೋರಮಂಗಲ ಪೊಲೀಸ್ ತಂಡ ಹಾಗೂ ನಾಲ್ಕನೆಯ ಬಹುಮಾನ ಬಿ.ಎಸ್ ಎಲ್. (ಬಿ) ತಂಡ ಮುತ್ತೂರು ಪಡೆದವು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….