ಕೊರಟಗೆರೆ, (ಆಗಸ್ಟ್.16); ರಾಜ್ಯದೆಲ್ಲೆಡೆ ಇಂದು ವರಮಹಾಲಕ್ಷ್ಮಿ ದೇವಿಗೆ ಪೂಜೆಯನ್ನ ಭಕ್ತರು ಅದ್ಧೂರಿಯಾಗಿ ನೆರವೇರಿಸುತ್ತಿದ್ದಾರೆ. ಈ ವಿಶೇಷ ದಿನದಂದು ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಜನಸಾಗರವೇ ಹರಿದು ಬಂದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಿ ದೇಗುಲದಲ್ಲಿ ಇಂದು ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ.
ಮುಂಜಾನೆಯೇ ಶುರುವಾಗಿರುವ ಭಕ್ತರ ಆಗಮನ. ತಮ್ಮ ಮನೆಗಳಲ್ಲಿ ಮಹಾಲಕ್ಷ್ಮಿಗೆ ಪೂಜೆ ಸಲ್ಲಿಸಿದ ಮಹಿಳೆಯರು ಹಾಗೂ ಭಕ್ತ ವೃಂದ ದೇಗುಲಕ್ಕೂ ಆಗಮಿಸಿ ವಿಶೇಷವಾದ ಪೂಜೆ ಸಲ್ಲಿಸಿ ದೇವಿಗೆ ನಮಿಸುತ್ತಿದ್ದಾರೆ.
ಶ್ರಾವಣ ಮಾಸದ 2ನೇ ಶುಕ್ರವಾರ ವರ ಮಹಾಲಕ್ಷ್ಮಿ ಹಬ್ಬ ಭಕ್ತರಿಗೆ ಸಕಲ ಸಂಪತ್ತು ತಂದುಕೊಡುತ್ತದೆ ಎಂಬ ವಾಡಿಕೆ ಇದೆ. ಹೀಗಾಗಿ ಭಕ್ತರು ಮಹಾಲಕ್ಷ್ಮಿ ದೇವಿಗೆ ಭಕ್ತಿಯಿಂದ ನಮಿಸುತ್ತಿದ್ದಾರೆ.
ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಸಾಮಾನ್ಯ ದಿನಗಳಲ್ಲೇ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಂದು ವಿಶೇಷ ದಿನವಾದ ಹಿನ್ನೆಲೆಯಲ್ಲಿ ದೂರದ ಊರುಗಳಿಂದ ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಭಕ್ತರು ಬರುತ್ತಿದ್ದು, ದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿದೆ.
ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದ ಭಕ್ತರು ಗೊರವನಹಳ್ಳಿಯ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಭಕ್ತಿಯಿಂದ ನಮಿಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….