ಬೆಂಗಳೂರು, (ಆಗಸ್ಟ್.16); ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಇನ್ನು ಮುಂದೆ ತಮ್ಮ ಐಡಿ ಕಾರ್ಡ್‌ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಹಾಕಿ ಧರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
“ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ ಈ ಆದೇಶ ಹೊರಡಿಸಿದ್ದಾರೆ.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ ಬರೋಬ್ಬರಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಐಡಿ ಕಾರ್ಡ್ ಟ್ಯಾಗ್ ಅನ್ನು ಕೆಂಪು-ಹಳದಿ ಟ್ಯಾಗ್ ಬಳಸುವಂತೆ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ ಅರೆ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಬ್ಬಂದಿಗೆ ಹಳದಿ ಮತ್ತು ಕೆಂಪು ಬಣ್ಣದ ಟ್ಯಾಗ್ ನೀಡುವಂತೆ ಸೂಚಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….