ಬಾಗಲಕೋಟೆ, (ಆಗಸ್ಟ್.19): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.
ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.
ನಗರದ ಜಿಲ್ಲಾಡಳಿತದ ಸಮೀಪ ಪ್ರತಿಭಟನಾಕಾರರು ಟಯರ್’ಗೆ ಬೆಂಕಿ ಹಚ್ಚಿ,ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ, ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿದ್ಧರಾಮಯ್ಯನವರ ಅಭಿಮಾನಿ ಪೆಟ್ರೋಲ್ ಕಸಿದಯ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ತಡೆದು, ಪೊಲೀಸರ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.
ಗಾಯಗೊಂಡ ವ್ಯಕ್ತಿಯನ್ನು ಗುಳೇದಗುಡ್ಡ ಸಮೀಪದ ನಾಗರಾಳ ಎಸ್.ಪಿ.ಗ್ರಾಮದ ನಿವಾಸಿ ದ್ಯಾವಪ್ಪ ಮಾಗಿ ಎಂದು ಗುರ್ತಿಸಲಾಗಿದೆ.
ವ್ಯಕ್ತಿ ಕೈ, ಮೈ, ಕುತ್ತಿಗೆ, ಎದೆ,ವಬೆನ್ನು ಸೇರಿ ಹಲವೆಡೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಎಂ ಸಲಹೆ; ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು.
ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ದಯವಿಟ್ಟು ಎಚ್ಚರಿಕೆಯಿಂದಿರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….