ಬೆಂಗಳೂರು, (ಆಗಸ್ಟ್.19); ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ.
ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ ವೇಳೆ ಈ ಅನಾಹುತ ಸಂಭವಿಸಿದೆ.
ಮೃತ ವ್ಯಕ್ತಿಯೂ ಕೋಲಾರದ ಕುರುಬ ಸಂಘದ ಮುಖಂಡರಾಗಿದ್ದರು ಎನ್ನಲಾಗಿದೆ. ಇಂದು ನಡೆಯುತ್ತಿದ್ದ ಪ್ರೆಸ್ ಕ್ಲಬ್ನಲ್ಲಿ ಈ ಘಟನೆ ಸಂಭವಿಸಿದೆ.
ಕೂಡಲೇ ಹೃದಯಾಘಾತಕ್ಕೀಡಾದ ರವಿಚಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ರವಿಚಂದ್ರ ಮೃತಪಟ್ಟಿದ್ದಾರೆ.
ಸಿಎಂ ಸಂತಾಪ; ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.
ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….