News Update| ಮಳೆಯಿಂದಾಗಿ ದೊಡ್ಡಬಳ್ಳಾಪುರದ ರಸ್ತೆಗಳು ಜಲಾವೃತ: ಅವ್ಯವಸ್ಥೆ ವಿರುದ್ಧ ಸ್ಥಳೀಯರ ಹಿಡಿ ಶಾಪ| ವೈರಲ್ ವಿಡಿಯೋಗಳನ್ನು ನೋಡಿ

ದೊಡ್ಡಬಳ್ಳಾಪುರ, (ಆಗಸ್ಟ್.19); ನಗರದಲ್ಲಿ ಸೋಮವಾರ ಮಧ್ಯಾಹ್ನ  ಸುಮಾರು ಒಂದು ಗಂಟೆಗಳ ಕಾಲ ಸುರಿದ ಸತತ ಮಳೆಯಿಂದಾಗಿ ನಗರದ ಹಲವಾರು ಕಡೆ ಚರಂಡಿಗಳು ಉಕ್ಕಿ ಹರಿದು ರಸ್ತೆಯಲ್ಲಾ ಜಲಾವೃತವಾಗಿ ನಾಗರಿಕರು ಹಿಡಿ ಶಾಪ ಹಾಕುವಂತಾಗಿತ್ತು. 

ನಗರದ ತೇರಿನ ಬೀದಿ ಅರಳು ಮಲ್ಲಿಗೆ ಬಾಗಿಲು  ನೆಲಮಂಗಲ ರಸ್ತೆಯಲ್ಲಿ ಮಳೆಯಿಂದಾಗಿ ಚರಂಡಿಗಳಲ್ಲಿನ ಕೊಳಚೆ ನೀರು ರಸ್ತೆಗೆ ಹರಿದು, ವಾಹನ ಸಂಚಾರರು ಪರದಾಡುವಂತಾಗಿತ್ತು.

ನಗರದ ತೇರಿನ ಬೀದಿ ಬಳಿಯ ರಸ್ತೆಯ ಮೇಲೆ ಸುಮಾರು ಒಂದು ಅಡಿಯಷ್ಟು ನೀರು ನಿಂತಿತ್ತು. ಇಲ್ಲಿನ ರಾಜಕಾಲುವೆಯಲ್ಲಿ ನೀರು ತುಂಬಿದ್ದು, ಪ್ರಾಣಾಪಾಯದ ಆತಂಕ ಎದುರಾಗಿದೆ.

ವಿಶ್ವೇಶ್ವರಯ್ಯ ವೃತ್ತದ ಬಳಿ ಇರುವ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಶಾಲೆಯ ಮೈದಾನ ಪೂರ್ತಿ ಜಲಾವೃತವಾಗಿದ್ದು, ಶಾಲಾ ಮಕ್ಕಳು ಹಾಗೂ ಶಿಕ್ಷಕರು ಕೆಸರಿನಲ್ಲಿಯೇ ನಡೆಯುವಂತಾಗಿತ್ತು. ಶಾಲೆಗೆ ಹೊಂದಿಕೊಂಡಿರುವ ರಾಜ ಕಾಲುವೆ ಕಿರಿದಾಗಿದ್ದು, ಇದರಲ್ಲಿ ಕಸ ಕಡ್ಡಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಹರಿಯದೇ ಶಾಲೆಯ ಮೈದಾನಕ್ಕೆ ಬರುತ್ತದೆ. ಅಲ್ಲದೇ ಹಿಂದೆ ಚೈತನ್ಯ ನಗರದ ರಸ್ತೆಯಲ್ಲಿಯ ಚರಂಡಿಗಳಲ್ಲಿಯೂ ಸಹ ಇದೇ ಸಮಸ್ಯೆಯಾಗಿದ್ದು, ಮಳೆ ಬಂದರೆ ಜನರು ಕೆಸರು ನೀರಿನಲ್ಲಿ ಓಡಾಡಬೇಕಿದೆ. ಬಗ್ಗೆ ಜನಪ್ರತಿನಿಗಳಾಗಲೀ, ನಗರಸಭೆ ಅಧಿಕಾರಿಗಳಾಗಲೀ ಕ್ರಮ ಕೈಗೊಂಡಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ. 

ಇನ್ನು ನಗರದ ಗಾಂಧಿ ವೃತ್ತದಿಂದ ಡಿಕ್ರಾಸ್‍ಗೆ ಸಾಗುವ ರಸ್ತೆಯಲ್ಲಿ ಮಳೆ ನೀರು ಚರಂಡಿಗೆ ಸಾಗದೆ ರಸ್ತೆಯಲ್ಲಿಯೇ ನಿಂತು ವಾಹನ ಸವಾರರಿಗೆ ಅಡಚಣೆ ಉಂಟಾಯಿತು. ತೇರಿನ ಬೀದಿ ರಾಜಕಾಲುವೆ ತುಂಬಿ ರಸ್ತೆಗೆ ತ್ಯಾಜ್ಯ ನೀರು ಹರಿದರೆ, ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್‍ನಲ್ಲಿ ನೀರು ನಿಲ್ಲುತ್ತಿದೆ, ಕುಚ್ಚಪ್ಪನ ಪೇಟೆ, ಸಂಜಯನಗರ, ರಂಗಪ್ಪ ಸರ್ಕಲï, ತಾಲೂಕು ಕಚೇರಿ ಮುಂಭಾಗದ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಒಳಚರಂಡಿ ನೀರು ತುಂಬಿ ರಸ್ತೆ ಹರಿಯುವ ಕಾರಣ ನಗರವಾಸಿಗಳು ತೀವ್ರ ತೊಂದರೆ ಎದುರಿಸುವಂತಾಗಿತ್ತು.

ಎರಡು ತಿಂಗಳ ಹಿಂದೆ ಮಳೆ ಬಂದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ನಗರಸಭೆ ಎಚ್ಚೆತ್ತುಕೊಂಡಿಲ್ಲ. ಚರಂಡಿಗಳಲ್ಲಿ, ಪ್ಲಾಸ್ಟಿಕ್ ತ್ಯಾಜ್ಯ, ಕಸ, ಕಡ್ಡಿಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸದಿರುವುದು, ಒಳಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೇ ಇರುವುದು ಸಹ ಇದಕ್ಕೆ ಕಾರಣವಾಗಿದೆ.

ಇನ್ನು ತಗ್ಗು ಪ್ರದೇಶದಲ್ಲಿರುವ ಕಾಲೋನಿಗಳಲ್ಲಿ ಮಳೆ ನೀರು ಮನೆಗಳಿಗೇ ಹರಿದಿವೆ. ಮಳೆಗಾಲದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ನಗರಸಭೆ ಅಧಿಕಾರಿಗಳು ಕೈಗೊಳ್ಳದ ಕಾರಣ ನಗರದ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಅಧೀಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!