ದೊಡ್ಡಬಳ್ಳಾಪುರ, (ಆಗಸ್ಟ್.22): ಕ್ರೀಡೆಯು ಮಾನವನ ಜೀವನದಲ್ಲಿ ಪ್ರಮುಖವಾಗಿದೆ. ನಮ್ಮ ದೈಹಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿಯು ಕ್ರೀಡೆಯು ಮಹತ್ವದ ಪಾತ್ರವಹಿಸುತ್ತದೆ. ಶಾಲೆಗಳಲ್ಲಿ ಕ್ರೀಡೆಯನ್ನು ಕಡ್ಡಾಯಗೊಳಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಅವರು ತಾಲ್ಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ಪ್ರಾರಂಭವಾದ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಎರಡು ದಿನಗಳ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಕನಿಷ್ಠ ಒಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕವಾಗಿ ಸೃದೃಢವಾಗಲು ಸಹಕಾರಿಯಾಗಲಿದೆ ಎಂದರು.
ಸಮಾರಂಭದಲ್ಲಿ ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು, ಮುಖಂಡರಾದ ಪ್ರಕಾಶ್, ವಿಜಯ್ ಕುಮಾರ್, ಸಿದ್ದಬೈರೇಗೌಡ ಹಾಗೂ ತಾಲ್ಲೂಕಿನ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….