ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 22): ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಟ್ಟಕೋಟೆ ಗ್ರಾಮ ಪಂಚಾಯಿತಿ ರವರ ಸಹಯೋಗದಲ್ಲಿ ಮೇಜರ್ ದ್ಯಾನ್ ಚಂದ್ ರವರ 119ನೇ ವರ್ಷದ ಹುಟ್ಟು ಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಆಗಸ್ಟ್ 29ರಂದು ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೋಟೆಯ ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆಯ ಧ್ಯಾನ ಚಂದ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಮುಕ್ತ ಹಾಕಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪುರುಷ ಮತ್ತು ಮಹಿಳಾ ಹಾಕಿ ಕ್ರೀಡಾಪಟುಗಳು ಭಾಗವಹಿಸಬಹುದಾಗಿದ್ದು, ಆಸಕ್ತ ಕ್ರೀಡಾಪಟುಗಳು ಆಗಸ್ಟ್ 27 ರೊಳಗೆ ತಂಡಗಳನ್ನು ನೋಂದಣಿ ಮಾಡಿಕೊಳ್ಳಲು ಹೆಚ್ಚಿನ ಮಾಹಿತಿಗಾಗಿ : 080-29787443 / 9945029942 ಇಲ್ಲಿಗೆ ಸಂಪರ್ಕಿಸಿ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….