ಕುಸಿದು ಬಿದ್ದ ಮೋದಿ ಉದ್ಘಾಟಿಸಿದ ಶಿವಾಜಿ ಪ್ರತಿಮೆ; ಕಳಪೆ ಕಾಮಗಾರಿ ಆರೋಪ| ವೈರಲ್ ವಿಡಿಯೋ ನೋಡಿ

ಸಿಂಧುದುರ್ಗ, (ಆಗಸ್ಟ್.26); ಕಳೆದ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಿವಾಜಿ ಅವರ ಪ್ರತಿಮೆ  ಇಂದು ಮಧ್ಯಾಹ್ನ ಮುರಿದು ಬಿದ್ದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ (ಅಗಸ್ಟ್ 26) ಕುಸಿದು ಬಿದ್ದಿದೆ.

ಮಾಲ್ವಾನ್‌ನ ರಾಜ್‌ ಕೋಟ್ ಕೋಟೆಯಲ್ಲಿ 35 ಅಡಿ ಎತ್ತರದ ಪ್ರತಿಮೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಈ ಪ್ರತಿಮೆಯ ಕುಸಿತದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತಜ್ಞರು ನಿಖರವಾದ ಕಾರಣವನ್ನು ಇನ್ನಷ್ಟೇ ಖಚಿತಪಡಿಸಬೇಕಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಸದ್ಯ ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕನ ನಡೆಸಿದ್ದು ಹಾನಿಯನ್ನು ಪರಿಶೀಲಿಸಲಾಗುತ್ತಿದೆ.

ಕಳೆದ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೋಟೆಯಲ್ಲಿ ನಡೆದ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಈ ಬಗ್ಗೆ ರಾಜಕೀಯ ಆರೋಪ ಪ್ರತ್ಯಾರೋಪಗಳು ಶುರುವಾಗಿದ್ದು ಎನ್‌ಸಿಪಿ ಎಸ್‌ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಜಯಂತ್ ಪಾಟೀಲ್‌, ರಾಜ್ಯ ಸರ್ಕಾರ ಸರಿಯಾಗಿ ಕಾಳಜಿ ವಹಿಸದ ಕಾರಣ ಪ್ರತಿಮೆ ಪತನವಾಗಿದೆ ಎಂದಿದ್ದಾರೆ.

ಅಲ್ಲದೆ ಘಟನೆ ಕುರಿತು ಕಾಂಗ್ರೆಸ್ ಕೆಂಡಕಾರಿದ್ದು, ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ. ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮಹಾರಾಷ್ಟ್ರದ ರಾಜ್‌ಕೋಟ್‌ನಲ್ಲಿ ಡಿಸೆಂಬರ್ 4, 2023 ರಂದು ಅನಾವರಣಗೊಳಿಸಿದರು. 

ಈಗ ಸುಮಾರು 8 ತಿಂಗಳ ನಂತರ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಹಾಪುರುಷರನ್ನೂ ಬಿಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟ್ಚಿಟ್ ಮಾಡಿದೆ.

ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]