ಸಿಂಧುದುರ್ಗ, (ಆಗಸ್ಟ್.26); ಕಳೆದ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಿವಾಜಿ ಅವರ ಪ್ರತಿಮೆ ಇಂದು ಮಧ್ಯಾಹ್ನ ಮುರಿದು ಬಿದ್ದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ (ಅಗಸ್ಟ್ 26) ಕುಸಿದು ಬಿದ್ದಿದೆ.
ಮಾಲ್ವಾನ್‌ನ ರಾಜ್ ಕೋಟ್ ಕೋಟೆಯಲ್ಲಿ 35 ಅಡಿ ಎತ್ತರದ ಪ್ರತಿಮೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ ಎಂದು ಹೇಳಲಾಗುತ್ತಿದೆ.
ಈ ಪ್ರತಿಮೆಯ ಕುಸಿತದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತಜ್ಞರು ನಿಖರವಾದ ಕಾರಣವನ್ನು ಇನ್ನಷ್ಟೇ ಖಚಿತಪಡಿಸಬೇಕಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ಸದ್ಯ ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕನ ನಡೆಸಿದ್ದು ಹಾನಿಯನ್ನು ಪರಿಶೀಲಿಸಲಾಗುತ್ತಿದೆ.
ಕಳೆದ ವರ್ಷ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೋಟೆಯಲ್ಲಿ ನಡೆದ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಈ ಬಗ್ಗೆ ರಾಜಕೀಯ ಆರೋಪ ಪ್ರತ್ಯಾರೋಪಗಳು ಶುರುವಾಗಿದ್ದು ಎನ್‌ಸಿಪಿ ಎಸ್‌ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಜಯಂತ್ ಪಾಟೀಲ್, ರಾಜ್ಯ ಸರ್ಕಾರ ಸರಿಯಾಗಿ ಕಾಳಜಿ ವಹಿಸದ ಕಾರಣ ಪ್ರತಿಮೆ ಪತನವಾಗಿದೆ ಎಂದಿದ್ದಾರೆ.
ಅಲ್ಲದೆ ಘಟನೆ ಕುರಿತು ಕಾಂಗ್ರೆಸ್ ಕೆಂಡಕಾರಿದ್ದು, ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ. ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮಹಾರಾಷ್ಟ್ರದ ರಾಜ್‌ಕೋಟ್‌ನಲ್ಲಿ ಡಿಸೆಂಬರ್ 4, 2023 ರಂದು ಅನಾವರಣಗೊಳಿಸಿದರು.
ಈಗ ಸುಮಾರು 8 ತಿಂಗಳ ನಂತರ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಹಾಪುರುಷರನ್ನೂ ಬಿಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟ್ಚಿಟ್ ಮಾಡಿದೆ.
ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….